– 200ಕ್ಕೂ ಹೆಚ್ಚು ಜನರಿದ್ದ ಅಪಾರ್ಟ್ಮೆಂಟ್
ಆಂಟ್ವೆರ್ಪ್: ಬೆಲ್ಜಿಯಂನ (Belgium) ಆಂಟ್ವೆರ್ಪ್ ನಗರದಲ್ಲಿರುವ 10 ಅಂತಸ್ತಿನ ಅಪಾರ್ಟ್ಮೆಂಟ್‌ನಲ್ಲಿ(Fire Accident) ಭಾರೀ ಬೆಂಕಿ ಕಾಣಿಸಿಕೊಂಡಿದೆ. 8ನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಕಟ್ಟಡದ ಇತರೆ ಭಾಗಗಳಿಗೂ ವ್ಯಾಪಿಸಿದೆ. ಈ ದುರ್ಘಟನೆಯಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಆಂಟ್ವೆರ್ಪ್ನ ಲಿಂಕರೋವರ್ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್‌ನ ಎಂಟನೇ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ ಬೆಂಕಿ ಕಟ್ಟಡದ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಪರಿಸ್ಥಿತಿ ಗಂಭೀರಗೊಂಡಿದೆ.
200ಕ್ಕೂ ಹೆಚ್ಚು ಜನರು ವಾಸವಿದ್ದ ಅಪಾರ್ಟ್ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ತುರ್ತು ಸೇವೆಗಳ ತಂಡಗಳು ಸ್ಥಳಕ್ಕೆ ಧಾವಿಸಿವೆ. ನಿವಾಸಿಗಳನ್ನು ಸುರಕ್ಷಿತವಾಗಿ ಹೊರ ಕರೆತರಲು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.
ಬೆಂಕಿಯ ತೀವ್ರತೆ ಹೆಚ್ಚಿದ್ದ ಕಾರಣ ಅಗ್ನಿಶಾಮಕ ಸಿಬ್ಬಂದಿಗೆ ಕಾರ್ಯಾಚರಣೆ ನಡೆಸುವುದು ಸವಾಲಾಗಿತ್ತು. ಕಾರ್ಯಾಚರಣೆಗೆ ವಿಶೇಷ ಡ್ರೋನ್ ತಂಡ ಸೇರಿದಂತೆ ಹಲವು ತುರ್ತು ಸೇವೆಗಳ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು.ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ; ನಾಳೆ ರೆಡ್ ಅಲರ್ಟ್ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ
ಕಟ್ಟಡದಿಂದ ದಟ್ಟ ಹೊಗೆ ಆವರಿಸಿದ್ದರಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ಮನೆಗಳ ಬಾಗಿಲು ಹಾಗೂ ಕಿಟಕಿಗಳನ್ನ ಮುಚ್ಚಲು ಮತ್ತು ಅಗತ್ಯವಿದ್ದರೆ ವೆಂಟಿಲೇಷನ್ ವ್ಯವಸ್ಥೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಘಟನೆಯಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಅಥವಾ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಅಧಿಕಾರಿಗಳು ತಕ್ಷಣಕ್ಕೆ ಲಭ್ಯವಾಗಿಲ್ಲ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಕೂಡ ಇನ್ನೂ ತಿಳಿದುಬಂದಿಲ್ಲ.ಇದನ್ನೂ ಓದಿ: Ram Mandir Donation Row | 77.85 ಲಕ್ಷ ಹಣ, 1121 ಡಾಲರ್ ಕರೆನ್ಸಿ ಜಪ್ತಿ – ರಾಮನ ದೇಣಿಗೆ ಕದ್ದವರ ಮನೆಯಲ್ಲಿ ಸಿಕ್ಕಿದ್ದೇನು?
