– ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ
ನವದೆಹಲಿ: ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೆಹಲಿಯ (Delhi) ರೋಹಿಣಿ ಸೆಕ್ಟರ್ 16ರಲ್ಲಿ (Rohini Sector 16) ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಇಂದು (ಜು.8) ಸಂಜೆ 4:20ರ ಸುಮಾರಿಗೆ ಮಾಹಿತಿ ತಿಳಿಯುತ್ತಿದ್ದಂತೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯುವ ಹಾಗೂ ಸ್ಥಳಾಂತರಿಸುವ ಕಾರ್ಯ ನಡೆಸುತ್ತಿದೆ. ಇದನ್ನೂ ಓದಿ: ಅಯೋಧ್ಯೆ, ಬದರಿನಾಥ ಬಳಿಕ ಬಾಗಲಾಮುಖಿ ದೇವಾಲಯದಲ್ಲೂ ಕಾಣಿಕೆ ದುರ್ಬಳಕೆ ಆರೋಪ
ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹಲವಾರು ಜನರನ್ನು ಅವಶೇಷಗಳ ಅಡಿಯಿಂದ ಹೊರತೆಗೆದಿದ್ದಾರೆ. ಆದರೆ ಎಷ್ಟು ಜನ ಸಿಲುಕಿಕೊಂಡಿದ್ದಾರೆ ಹಾಗೂ ಎಷ್ಟು ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
