ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆಯುತ್ತಿರುವ ಐತಿಹಾಸಿಕ ಮಹಾ ಕುಂಭಮೇಳದ ಟೆಂಟ್ ಸಿಟಿಯಲ್ಲಿ ಎರಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ ಅವಗಢ ಸಂಭವಿಸಿದ್ದು, ಸುಮಾರು 18 ಟೆಂಟ್‌ಗಳು ಸುಟ್ಟು ಭಸ್ಮವಾಗಿದೆ. ಆದ್ರೆ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿ ವ್ಯಾಪಿಸುತ್ತಿದ್ದಂತೆ ಸುರಕ್ಷತಾ ವ್ಯವಸ್ಥೆಯ ಭಾಗವಾಗಿ ನಿಯೋಜಿಸಲಾಗಿದ್ದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಿಸಿವೆ. ಸುತ್ತಮುತ್ತಲಿನ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದ ಜನರನ್ನ ಸುರಕ್ಷತೆಗಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 2 ಗ್ಯಾಸ್ ಸಿಲಿಂಡರ್ ಸ್ಫೋಟ – ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ, ಧಗಧಗಿಸಿದ ಜ್ವಾಲೆ
ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಘಟನಾವಳಿಯ ಬಗ್ಗೆ ಮಾಹಿತಿ ನೀಡುವಂತೆ ಯೋಗಿ ಆದಿತ್ಯನಾಥ್ ಅವರಿಗೆ ತಿಳಿಸಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ಪರಿಹಾರ ವಿತರಣೆ
7.72 ಕೋಟಿ ಭಕ್ತರಿಂದ ಪುಣ್ಯಸ್ನಾನ:
ಜ.13ರಂದು ಆರಂಭವಾದ ಮಹಾ ಕುಂಭಮೇಳವು ಫೆ.26ರ ವರೆಗೆ ನಡೆಯಲಿದೆ. ಈಗಾಗಲೇ 7.72 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಭಾನುವಾರವಾದ ಇಂದು 46.95 ಲಕ್ಷಕ್ಕೂ ಹೆಚ್ಚು ಭಕ್ತರು ಸ್ನಾನ (ಪವಿತ್ರ ಸ್ನಾನ) ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನೂ ಮಹಾ ಕುಂಭದಲ್ಲಿ ಬೆಂಕಿ ನಂದಿಸುವ ಘಟನೆಯು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಆಡಳಿಯ ಮಂಡಳಿಯು ರಕ್ಷಣಾ ಕ್ರಮ ಕೈಗೊಳ್ಳುವ ಜೊತೆಗೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲಿದೆ. ಅಲ್ಲದೇ ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಗಂಗಾ ದೇವಿಯನ್ನು ಪ್ರಾರ್ಥಿಸುತ್ತೇವೆ ಎಂಬುದಾಗಿ ಕುಂಭಮೇಳ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ತೀವ್ರಗೊಂಡ ಬಣ ಕಚ್ಚಾಟ – ವಸ್ತುಸ್ಥಿತಿ ವರದಿ ಪಡೆಯಲು ರಾಜ್ಯಕ್ಕೆ ಬಿಎಲ್ ಸಂತೋಷ್ ಎಂಟ್ರಿ