ಚೆನ್ನೈ: ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಸಾಕಷ್ಟು ಹಾನಿಯುಂಟಾಗುತ್ತಿದೆ. ಈ ಹಿನ್ನೆಲೆ ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳು ತಮಿಳುನಾಡು (Tamil Nadu) ಮತ್ತು ಪುದುಚೇರಿಯ (Puducherry) ಹಲವಾರು ಜಿಲ್ಲೆಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.
ಶುಕ್ರವಾರ ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಕಲ್ಲಕುರಿಚಿ, ಸೇಲಂ, ವೆಲ್ಲೂರು, ತಿರುಪತ್ತೂರು, ರಾಣಿಪೇಟ್, ತಿರುವಣ್ಣಾಮಲೈ ಮತ್ತು ಪುದುಚೇರಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (Indian Metrological Department) ರೆಡ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಬೆಂಗ್ಳೂರಿಗೆ ಮೋದಿ ಆಗಮನ – BMTC, KSRTC ಬಸ್ ಸಂಚಾರ 2 ಗಂಟೆ ಸ್ಥಗಿತ
Advertisement
Advertisement
ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಕಡಲೂರು, ಮೈಲಾಡುತುರೈ, ತಿರುವಾರೂರ್, ನಾಗಪಟ್ಟಿಣಂ, ತಂಜಾವೂರು, ವಿಲ್ಲುಪುರಂ ಮತ್ತು ಅರಿಯಲೂರು ಜಿಲ್ಲೆಗಳಲ್ಲಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಭಯಂಕರವಾಗಿ ಆಡಿದ್ರೂ ಭಾರತ ಸೋಲೋದಕ್ಕೆ ಅರ್ಹವಾಗಿತ್ತು- ಅಖ್ತರ್ ಟೀಕೆ
Advertisement
Advertisement
ರಾಣಿಪ್ಪೆಟ್ಟೈ ತಿರುವಣ್ಣಾಮಲೈ, ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್‍ಪಟ್ಟು, ವಿಲ್ಲುಪುರಂ, ಕಲ್ಲಕ್ಕುರಿಚಿ, ಕಡಲೂರು, ಅರಿಯಲೂರ್, ಪೆರಂಬಲೂರ್, ತಂಜಾವೂರು, ಮೈಲಾಡು, ತಿರುವರುರೈ, ತಿರುವರುರೈ, ರಾಣಿಪ್ಪೆಟ್ಟೈ ತಿರುವಣ್ಣಾಮಲೈನಲ್ಲಿ ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಮಾಪನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.