ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (SLBC) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು (Tunnel Collapses) ಕನಿಷ್ಠ 8 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.
ನಾಗರ್‌ಕರ್ನೂಲ್ (Nagarkurnool) ಜಿಲ್ಲೆಯ ಅಮ್ರಾಬಾದ್‌ನಿಂದ ಸುರಂಗ ನಿರ್ಮಾಣವಾಗುತ್ತಿದೆ. ದೋಮಲಪೆಂಟಾ ಬಳಿಯ ಶ್ರೀಶೈಲಂ ಅಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿದೆ. ಈ ಪೈಕಿ ಮೂವರು ತಪ್ಪಿಸಿಕೊಂಡಿದ್ದು, ಕನಿಷ್ಠ 8 ಮಂದಿ ಸುರಂಗದಲ್ಲಿ ಸಿಲುಕಿರುವ ಶಂಕೆಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿಗಳು ತಿಳಿಸಿವೆ.
Advertisement
Advertisement
ಸದ್ಯ ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಬಾಡಿಗೆ, ಲೀಸ್ ಪಡೆಯುವ ಮುನ್ನ ಎಚ್ಚರವಾಗಿರಿ – 50ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂ. ವಂಚನೆ
Advertisement
ಘಟನೆ ಕುರಿತು ತೆಲಂಗಾಣ ಸಿಎಂ ರೇವಂತ್ ರೆಡ್ಡಿ (Revanth Reddy) ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಆದ್ರೆ ಈಗಲೇ ನಿಖರವಾದ ಅಂಕಿ-ಅಂಶ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳ ಅಂತ್ಯಕ್ಕೆ 4 ದಿನ ಬಾಕಿ – ಮಹಾಶಿವರಾತ್ರಿ ಹಿನ್ನೆಲೆ ಪುಣ್ಯಸ್ನಾನಕ್ಕೆ ಆಗಮಿಸುತ್ತಿರುವ ಭಕ್ತಕೋಟಿ
Advertisement
ಜೊತೆಗೆ ಜಿಲ್ಲಾಧಿಕಾರಿ, ಎಸ್ಪಿ, ಅಗ್ನಿಶಾಮಕ ದಳ, ಜಲಮಂಡಳಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಸಿಎಂ ಸೂಚನೆ ಬೆನ್ನಲ್ಲೇ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ಹಾಗೂ ನೀರಾವರಿ ಇಲಾಖೆಯ ಇತರ ಅಧಿಕಾರಿಗಳು ವಿಶೇಷ ಹೆಲಿಕಾಪ್ಟರ್‌ನಲ್ಲಿ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಕಿಡಿಗೇಡಿಗಳು ಒಣಹುಲ್ಲಿಗೆ ಬೆಂಕಿ ಹಚ್ಚಿದ್ದರಿಂದ ಚಾಮುಂಡಿಬೆಟ್ಟದಲ್ಲಿ 35 ಎಕ್ರೆ ಅರಣ್ಯ ನಾಶವಾಗಿದೆ: ಡಿಸಿಎಫ್