ಡೆಹ್ರಾಡೂನ್: ನಿರ್ಮಾಣ ಹಂತದಲ್ಲಿದ್ದ ಸುರಂಗದೊಳಗೆ (Tunnel) ಏಕಾಏಕಿ ಭಾರಿ ಪ್ರಮಾಣದ ನೀರು ಹಾಗೂ ಅವಶೇಷಗಳು (Debris) ನುಗ್ಗಿದ ಪರಿಣಾಮ ಕನಿಷ್ಠ 10 ಕಾರ್ಮಿಕರು ಸಿಲುಕಿರುವ ಘಟನೆ ಉತ್ತರಾಖಂಡದ (Uttarakhand) ಚಮೋಲಿ (Chamoli) ಜಿಲ್ಲೆಯಲ್ಲಿ ಗುರುವಾರ ಸಂಜೆ ನಡೆದಿದೆ.
ಪಿಪಲ್‌ಕೋಟಿ ಪ್ರದೇಶದಲ್ಲಿರುವ ಟಿಹೆಚ್‌ಡಿಸಿ ಜಲವಿದ್ಯುತ್ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಈ ಘಟನೆ ಸಂಭವಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ಸುರಂಗದೊಳಗೆ ಒಟ್ಟು 18 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಏಕಾಏಕಿ ನೀರಿನ ರಭಸ ಸುರಂಗದೊಳಗೆ ನುಗ್ಗಿದ ಪರಿಣಾಮ ಹಲವು ಕಾರ್ಮಿಕರು ಸುರಂಗದ ಪ್ರವೇಶದ್ವಾರದತ್ತ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆ
ಈವರೆಗೆ ಸುಮಾರು 14ರಿಂದ 15 ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಚಮೋಲಿ ಜಿಲ್ಲಾಧಿಕಾರಿ ಗೌರವ್ ಕುಮಾರ್ ತಿಳಿಸಿದ್ದಾರೆ. ಸ್ಥಳಕ್ಕೆ ಅಂಬುಲೆನ್ಸ್‌ಗಳು ಹಾಗೂ ಪೊಲೀಸ್ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಚಮೋಲಿ ಪೊಲೀಸ್ ವರಿಷ್ಠಾಧಿಕಾರಿ ಸುರ್ಜೀತ್ ಸಿಂಗ್ ಪವಾರ್ ಹೇಳಿದ್ದಾರೆ. ಇದನ್ನೂ ಓದಿ: ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ: ಕಾಂಗ್ರೆಸ್ ನಾಯಕನ ತಬ್ಬಿಕೊಂಡು ರಾಗಾ ವ್ಯಂಗ್ಯ
ಇದು ಜಲವಿದ್ಯುತ್ ಯೋಜನೆಗಾಗಿ ನಿರ್ಮಿಸಲಾಗುತ್ತಿರುವ ಸುರಂಗವಾಗಿದೆ. ಸಂಜೆ ಸುಮಾರು 6:30ರ ವೇಳೆಗೆ ದೊಡ್ಡ ಪ್ರಮಾಣದ ನೀರು ಮತ್ತು ಅವಶೇಷಗಳು ಏಕಾಏಕಿ ಸುರಂಗದೊಳಗೆ ನುಗ್ಗಿವೆ. ಆ ಸಮಯದಲ್ಲಿ ಕರ್ತವ್ಯದಲ್ಲಿದ್ದ ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಗೌರವ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಆ.15ರಂದು ವಿಧಾನಸೌಧದಲ್ಲಿ ಫ್ರೀಡಂ ಹಬ್ಬ – QR ಕೋಡ್ ಮೂಲಕ ಪೂರ್ವ ನೋಂದಣಿ ಕಡ್ಡಾಯ
ಘಟನೆಯ ಬೆನ್ನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಿರಿಯ ಅಧಿಕಾರಿಗಳಿಂದ ಘಟನೆಯ ಕುರಿತು ಕ್ಷಣಕ್ಷಣದ ಮಾಹಿತಿ ಪಡೆಯುತ್ತಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಇದನ್ನೂ ಓದಿ: NALSAR 2026ರ ಪದವೀಧರರಿಗೆ ವಕೀಲರಾಗಿ ನೋಂದಣಿಗೆ ನಿರ್ಬಂಧ – ಸಿಜೆಐ ಆಹ್ವಾನ ವಿವಾದದ ಬೆನ್ನಲ್ಲೇ BCI ಆದೇಶ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳಕ್ಕೆ ತೆರಳಿ ಸುರಂಗದೊಳಗೆ ನುಗ್ಗಿರುವ ಅವಶೇಷಗಳನ್ನು ತೆರವುಗೊಳಿಸಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಸಮಾರಂಭಗಳಿಗೆ ಬ್ರೇಕ್ – ಮತ್ತೆ ಹೊಸ ಕಾಯ್ದೆಗೆ ಮುಂದಾದ ಸರ್ಕಾರ
ಕಳೆದ ಕೆಲವು ದಿನಗಳಿಂದ ಚಮೋಲಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ಜಿಲ್ಲೆಯ ಹಲವು ಭಾಗಗಳಲ್ಲಿ ನದಿಗಳು ಹಾಗೂ ಹಳ್ಳಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇದೇ ಸೋಮವಾರವೂ ಚಮೋಲಿ ಜಿಲ್ಲೆಯ ನೀತಿ ಕಣಿವೆ ಪ್ರದೇಶದಲ್ಲಿ ನದಿಯ ನೀರಿನ ಮಟ್ಟ ಏರಿಕೆಯಿಂದ ಉಂಟಾದ ಭಾರಿ ನೀರಿನ ರಭಸಕ್ಕೆ ಸೇತುವೆಯೊಂದು ಕೊಚ್ಚಿಕೊಂಡು ಹೋಗಿತ್ತು. ಇದನ್ನೂ ಓದಿ: ಕೇಸ್ ಇತ್ಯರ್ಥಕ್ಕೆ ಲಂಚಕ್ಕೆ ಕೈಯೊಡ್ಡಿದ ಪಿಎಸ್‌ಐ ʻಲೋಕಾʼ ಬಲೆಗೆ

