ಭೋಪಾಲ್: ಮಧ್ಯಪ್ರದೇಶದ ಪ್ರಸಿದ್ಧ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಜ್ಯೂನಿಯರ್ಸ್ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದು, ಅವಾಚ್ಯ ಶಬ್ಧದಿಂದ ನಿಂದಿಸಿದ್ದಾರೆ. ಜೊತೆಗೆ ದಿಂಬಿನೊಂದಿಗೆ ಸೆಕ್ಸ್ ಮಾಡಲು ಒತ್ತಾಯಿಸಿದ್ದಾರೆ ಎಂದು ಕಿರಿಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
Advertisement
ಹೌದು, ಇಂದೋರ್ನ ಎಂಜಿಎಂ ಮೆಡಿಕಲ್ ಕಾಲೇಜಿನಲ್ಲಿ ಹಿರಿಯ ವೈದ್ಯಕೀಯ ಪದವಿ ಮತ್ತು ಬ್ಯಾಚುಲರ್ ಆಫ್ ಸರ್ಜರಿ ವಿದ್ಯಾರ್ಥಿಗಳು ಕೆಲವು ಕಿರಿಯ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡಿರುವ ಆರೋಪವನ್ನು ಎದುರಿಸುತ್ತಿದೆ. ಈ ಕುರಿತಂತೆ ಕಿರಿಯ ವಿದ್ಯಾರ್ಥಿಯೋರ್ವ ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ (ಯುಜಿಸಿ) ಆ್ಯಂಟಿ ರ್ಯಾಗಿಂಗ್ ಸಹಾಯವಾಣಿಗೆ ಕರೆ ಮಾಡಿ ತಮಗಾದ ಕಹಿ ಘಟನೆ ಬಗ್ಗೆ ವಿವರಿಸಿದ್ದಾರೆ. ಹಿರಿಯ ಎಂಬಿಬಿಎಸ್ ವಿದ್ಯಾರ್ಥಿಗಳು ಫ್ಲ್ಯಾಟ್ಗಳಲ್ಲಿ ದಿಂಬಿನ ಜೊತೆಗೆ ಸೆಕ್ಸ್ ಮಾಡುವಂತೆ ಮತ್ತು ಮತ್ತು ಬ್ಯಾಚ್ಮೇಟ್ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸುವಂತೆ, ಅಲ್ಲದೇ ಬಲವಂತವಾಗಿ ಪರಸ್ಪರ ಕಪಾಳಮೋಕ್ಷ ಮಾಡಿಸಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: 3,419 ಕೋಟಿ ರೂ. ವಿದ್ಯುತ್ ಬಿಲ್ ಕಂಡು ಮಹಿಳೆಗೆ ಶಾಕ್ – ಮಾವ ಆಸ್ಪತ್ರೆಗೆ ದಾಖಲು
Advertisement
Advertisement
ರ್ಯಾಗಿಂಗ್ ಮೂಲಕ ವಿದ್ಯಾರ್ಥಿಗಳಿಗೆ ಮುಜುಗರವನ್ನುಂಟು ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದೀಗ ಪೊಲೀಸರು ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ಮುಂದುವರೆಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಠಾಣೆ ಪ್ರಭಾರಿ ತೆಹಜೀಬ್ ಖಾಜಿ ಹೇಳಿದ್ದಾರೆ. ಇದನ್ನೂ ಓದಿ: ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಷಡ್ಯಂತ್ರ – ತನಿಖೆ ನಡೆಸಿ ಉಗ್ರ ಶಿಕ್ಷೆಯಾಗಬೇಕು: ಶೋಭಾ ಕರಂದ್ಲಾಜೆ