ಚೆನ್ನೈ: ವಿರುದುನಗರದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ದುಷ್ಕರ್ಮಿಗಳಿಗೆ ಸರ್ಕಾರ ಕಠಿಣ ಶಿಕ್ಷೆ ವಿಧಿಸಬೇಕೆಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪಾಡಿ ಕೆ.ಪಳನಿಸ್ವಾಮಿ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ನಾನು ಭಾವಿಸಿದ್ದೇನೆ. ಇಲ್ಲದಿದ್ದಲ್ಲಿ ಪ್ರತಿಭಟನೆ ನಡೆಸಿ ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದಿನಿಂದ SSLC ಪರೀಕ್ಷೆ – ಸಮವಸ್ತ್ರ ಧರಿಸಿದ್ರೆ ಮಾತ್ರ ಪ್ರವೇಶಕ್ಕೆ ಅನುಮತಿ
Advertisement
Advertisement
ಸ್ಟಾಲಿನ್ ಅವರು ಅಧಿಕಾರಕ್ಕೆ ಬಂದ ನಂತರ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕೊಲೆ ಮತ್ತು ದರೋಡೆ ಜೊತೆಗೆ ಲೈಂಗಿಕ ದೌರ್ಜನ್ಯ ಅಪರಾಧಗಳು ಬೇರೆ ಸರ್ಕಾರಗಳು ಇದ್ದಾಗ ಹೆಚ್ಚಾಗಿ ಇರಲಿಲ್ಲ. ಆದರೆ ಸ್ಟಾಲಿನ್ ಅವರು ತಮ್ಮನ್ನು ತಾವೇ ತಮಿಳುನಾಡಿನ ಪ್ರಧಾನಿ ಎಂದು ಹೇಳಿಕೊಂಡಿದ್ದಾರೆ. ಅವರು ತಮಿಳುನಾಡು ಸಿಎಂ ಆದ ನಂತರ ತಮಿಳುನಾಡಿಗೆ ಏನು ನೀಡಿದ್ದಾರೆ. ಬದಲಿಗೆ ಅವರು ಸಿಎಂ ಆದ ನಂತರ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಮತ್ತು ಜನರು ಭಯದಿಂದ ಬದುಕುತ್ತಿದ್ದಾರೆ ಎಂದಿದ್ದಾರೆ.
Advertisement
Advertisement
ಈ ಮುನ್ನ ವಿಧಾನಸಭೆಯಲ್ಲಿ ಮಾತನಾಡಿದ ಎಂ.ಕೆ. ಸ್ಟಾಲಿನ್ ಅವರು ವಿರುದುನಗರದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸರಿಯಾಗಿ ನಿಭಾಯಿಸಿ ಶೀಘ್ರದಲ್ಲಿಯೇ ನ್ಯಾಯ ಒದಗಿಸಲಾಗುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದುತ್ವದ ವಿರೋಧಿ ಆಗ್ಬೇಡಿ: ಕೇಜ್ರಿವಾಲ್‍ಗೆ ಅಸ್ಸಾಂ ಸಿಎಂ ತಿರುಗೇಟು