ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ (Jani Master) ಕೇಂದ್ರ ಸರ್ಕಾರ ದೊಡ್ಡ ಶಾಕ್ ನೀಡಿದೆ. ಅವರಿಗೆ ನೀಡಲಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (National Film Awards) ರದ್ದುಗೊಳಿಸಿದೆ.
ಇತ್ತೀಚೆಗೆ ಜಾನಿ ಮಾಸ್ಟರ್ ವಿರುದ್ಧ ತಮ್ಮ ಸಹಾಯಕ ನೃತ್ಯ ಸಂಯೋಜಕಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ನಿರ್ಧಾರ ತೆಗೆದುಕೊಂಡಿದೆ. ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದೆ. ಇದನ್ನೂ ಓದಿ: ಜಾನಿ ಮಾಸ್ಟರ್ ಬಂಧನ: ಠಾಣೆ ಮುಂದೆ ಪತ್ನಿ ಹೈಡ್ರಾಮಾ
Advertisement
Advertisement
2022ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಗಳನ್ನು ಆಗಸ್ಟ್ ತಿಂಗಳಿನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿದುಬಂದಿದೆ. ತಮಿಳಿನ `ತಿರುಚಿತ್ರಂಬಲಂʼ ಚಿತ್ರದ ʻಮೇಘಂ ಕರುಕಥʼ ಗೀತೆಗಾಗಿ ಜಾನಿ ಮಾಸ್ಟರ್ ಮತ್ತು ಸತೀಶ್ ಮಾಸ್ಟರ್ ಅವರಿಗೆ ಉತ್ತಮ ನೃತ್ಯ ಸಂಯೋಜನೆ ವಿಭಾಗದಲ್ಲಿ ಜಂಟಿಯಾಗಿ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿತ್ತು. ಈ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಅಕ್ಟೋಬರ್ 8 ರಂದು ದೆಹಲಿಯಲ್ಲಿ ಆಯೋಜನೆಯಾಗಿದೆ. ರಾಷ್ಟ್ರಪತಿಗಳು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.
Advertisement
ಅಕ್ಟೋಬರ್ 8ರ ಸಮಾರಂಭಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿವೆ. ಈ ನಡುವೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾನಿ ಮಾಸ್ಟರ್ ಜೈಲಿನಲ್ಲಿದ್ದಾರೆ. ಪೋಕ್ಸೊ ಕಾಯ್ದೆಯಡಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ಇದು ಬಹಳ ಗಂಭೀರವಾದ ಪ್ರಕರಣ ಎಂದು ಸರ್ಕಾರ ಮತ್ತು ನ್ಯಾಯಾಲಯ ಪರಿಗಣಿಸಿ ರಾಷ್ಟ್ರ ಪ್ರಶಸ್ತಿಯನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್