ರಾಯಚೂರು: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು (Raichur) ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ.
ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ (Girl Student) ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಮಾನ್ವಿ ಪೊಲೀಸ್ (Manvi Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂಸಾಚಾರದ ಕಿಡಿ ಹೊತ್ತಿಸಿದ ಭಾಷಣ – ಉದ್ರಿಕ್ತರಿಂದ ಶೇಖ್ ಹಸೀನಾ ತಂದೆ ನಿವಾಸ ಧ್ವಂಸ
ಬಾಲಕಿಯ ಗ್ರಾಮದವನೇ ಆದ ಶಿವನಗೌಡ ಬಂಧಿತ ಆರೋಪಿ. ನಿತ್ಯ ಸ್ಕೂಲ್ ಬಸ್‌ನಲ್ಲಿ ಶಾಲೆಗೆ ವಿದ್ಯಾರ್ಥಿನಿ ಬರುತ್ತಿದ್ದಳು. ಈ ವೇಳೆ ಆರೋಪಿ ಬಂದು ವಿದ್ಯಾರ್ಥಿನಿಯನ್ನ ಹೊರಗಡೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಅಂತ ಆರೋಪಿಸಲಾಗಿದೆ.
ತಮಗೆ ಮಾಹಿತಿ ನೀಡದೆ ಅಪರಿಚಿತನೊಂದಿಗೆ ಮಗಳನ್ನ ಕಳುಹಿಸಿದ್ದಕ್ಕೆ ಪೋಷಕರು ಶಾಲಾ ವ್ಯವಸ್ಥಾಪಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ವ್ಯವಸ್ಥಾಪಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯನ್ನ ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಹಿನ್ನೆಲೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ – ಪಕ್ಕದ ಮನೆಯವನಿಂದಲೇ ಹೀನಕೃತ್ಯ