-ಮೃತ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ಪರಿಹಾರ ನೀಡುವಂತೆ ಆದೇಶ
ಶಿವಮೊಗ್ಗ: ಅಪ್ರಾಪ್ತ ಬಾಲಕಿ (Minor Girl) ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ (Penalty) ವಿಧಿಸಿ ಶಿವಮೊಗ್ಗ (Shivamogga) ನ್ಯಾಯಾಲಯ ತೀರ್ಪು ನೀಡಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಹೆಚ್ಚುವರಿ ಸಾದಾ ಶಿಕ್ಷೆ ಅನುಭವಿಸುವಂತೆ ಹಾಗೂ ಮೃತ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ (Court) ಆದೇಶಿಸಿದೆ.
Advertisement
2020ರಲ್ಲಿ ತೀರ್ಥಹಳ್ಳಿ ತಾಲೂಕಿನ 23 ವರ್ಷದ ಯುವಕ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (Sexual Assault) ಎಸಗಿದ್ದ. ಇದರಿಂದ ಮನನೊಂದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಳು. ಘಟನೆಯ ಬಳಿಕ ಬಾಲಕಿ ತಂದೆ ರಿಪ್ಪನ್ ಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ‘ಮೈ ಲಾರ್ಡ್’ ಹೇಳೋದು ಬಿಟ್ರೆ ನನ್ನ ಸಂಬಳದಲ್ಲಿ ಅರ್ಧ ಕೊಡ್ತೀನಿ: ಸುಪ್ರೀಂ ಜಡ್ಜ್
Advertisement
Advertisement
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೇ ಮೃತ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿ ತೀರ್ಪು ನೀಡಿದೆ. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಕೊಡುಗೆ ಆಡಳಿತ ಪಕ್ಷಕ್ಕೆ ಹೆಚ್ಚು – ಸುಪ್ರೀಂಗೆ ಕೇಂದ್ರ ಹೇಳಿಕೆ
Advertisement