ಧಾರವಾಡ: ದೇಶಾದ್ಯಂತ ಮೀಟೂ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದು, ಈಗ ಇದು ಪುರಸಭೆಗೂ ವ್ಯಾಪಿಸಿಕೊಂಡಿದೆ. ಹೌದು ಜಿಲ್ಲೆಯ ನವಲಗುಂದ ತಾಲೂಕಿನ ಅಣ್ಣಿಗೇರಿ ಪುರಸಭೆ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಮೀಟೂ ಆರೋಪ ಮಾಡಿದ್ದಾರೆ.
ಸಾವಿತ್ರಿ ಪೂಜಾರ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಮಹಿಳೆ. ನಗರಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಒಂದು ವರ್ಷದ ಹಿಂದೆ ತಮ್ಮ ಮೇಲಾದ ಲೈಂಗಿಕ ದೌರ್ಜನ್ಯವನ್ನು ಹೇಳಿಕೊಂಡಿದ್ದು, ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
Advertisement
Advertisement
ಏನಿದು ಪ್ರಕರಣ?:
ಅಣ್ಣಿಗೇರಿ ಪುರಸಭೆಯಲ್ಲಿ ನಾನು 2008ರಿಂದ 2017ರವರಿಗೆ ಕೆಲಸ ಮಾಡುತ್ತಿದ್ದೆ. ಕೆಲಸ ಕೊನೆಯ ವರ್ಷ 2016-17ರಲ್ಲಿ ಕಂದಾಯ ನಿರೀಕ್ಷಕ ವಿ.ಎಸ್.ಬಣಗಾರ, ಸಿಬ್ಬಂದಿ ಬಿ.ಎಫ್.ಜಿಡ್ಡಿ, ಗುತ್ತಿಗೆದಾರ ಮುತ್ತು ಸೂಡಿ ಸೇರಿದಂತೆ ಹಲವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವಿರುದ್ಧ ಧ್ವನಿ ಎತ್ತಿ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ 2017 ಸೆಪ್ಟೆಂಬರ್ 8ರಂದು ದೂರು ದಾಖಲಿಸಿದ್ದೆ. ಇದರಿಂದ ಕೋಪಗೊಂಡ ಅಧಿಕಾರಿಗಳು ನನ್ನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ನಾನು ಕಾನೂನು ಹೋರಾಟ ನಡೆಸಿದರೂ ನನಗೆ ನ್ಯಾಯ ಸಿಕ್ಕಿಲ್ಲ. ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಅಮಾನತು ಮಾಡಬೇಕು ಎಂದು ಸಂತ್ರಸ್ತೆ ಸಾವಿತ್ರಿ ಕೇಳಿಕೊಂಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv