ಕೋಲಾರ: ನಗರದ ಖಾಸಗಿ ನರ್ಸಿಂಗ್ ಕಾಲೇಜ್ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿನಿಯರಿಗೆ ವಾರ್ಷಿಕ ಶುಲ್ಕದ ಮೊತ್ತ ಕಡಿಮೆ ಮಾಡಲು ಕಾಲೇಜ್ನ ಆಡಳಿತಾಧಿಕಾರಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿರುವ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಕೋಲಾರದ ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್ ಕಾಲೇಜ್ಗೆ ಬಹಳ ಪುರಾತನ ಇತಿಹಾಸ ಇದೆ. ಕೋಲಾರ ನಗರದಲ್ಲಿ ಸುಮಾರು ನೂರು ವರ್ಷಗಳಿಂದ ವೈದ್ಯಕೀಯ ಸೇವೆಯನ್ನು ನೀಡುತ್ತಾ ಬಂದಿರುವ ಆಸ್ಪತ್ರೆ ಲಕ್ಷಾಂತರ ಜನರಿಗೆ ವೈದ್ಯಕೀಯ ಸೇವೆ ನೀಡಿದೆ. ಇಂದಿಗೂ ಅದೇ ಹೆಸರಿನೊಂದಿಗೆ ಕೋಲಾರ ನಗರದಲ್ಲಿ ವೈದ್ಯಕೀಯ ಸೇವೆ ನೀಡುತ್ತಾ ಬಂದಿರುವ ಆಸ್ಪತ್ರೆಯಲ್ಲಿ ಹೆಚ್ಚಾಗಿ ಬಡ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಸ್ಪತ್ರೆ ಕೆಲಸ ಮಾಡಿಕೊಂಡು ಬಂದಿದೆ. ಅಷ್ಟೇ ಅಲ್ಲದೇ ಆಸ್ಪತ್ರೆಯಲ್ಲಿ ಒಂದು ಭಾಗವಾಗಿ ನರ್ಸಿಂಗ್ ಕಾಲೇಜ್ ಕೂಡಾ ನಡೆಸಿಕೊಂಡು ಬರಲಾಗುತ್ತಿದೆ. ಈ ನರ್ಸಿಂಗ್ ಕಾಲೇಜ್ನಲ್ಲಿ ಕೋಲಾರ ಜಿಲ್ಲೆಯಷ್ಟೇ ಅಲ್ಲ, ಕೇರಳ ಸೇರಿದಂತೆ ಅಕ್ಕ ಪಕ್ಕದ ರಾಜ್ಯದ ವಿದ್ಯಾರ್ಥಿಗಳು ಈ ಆಸ್ಪತ್ರೆಯಲ್ಲಿ ನರ್ಸಿಂಗ್ ತರಬೇತಿ ಪಡೆಯುತ್ತಾ ಬಂದಿದ್ದಾರೆ. ಇದನ್ನೂ ಓದಿ: ಚಾಮರಾಜಪೇಟೆ ಮೈದಾನ ಬಳಿ ಗಣೇಶ ಗಲಾಟೆ – ಗಣೇಶ ಪ್ರತಿಷ್ಠಾಪನೆಗೆ ಪಟ್ಟು, ಠಾಣೆಗೆ ಮುತ್ತಿಗೆ
Advertisement
ಇಷ್ಟೇಲ್ಲ ಇತಿಹಾಸ ಹೊಂದಿರುವ ಖಾಸಗಿ ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಆಸ್ಪತ್ರೆ ಹಾಗೂ ನಸಿರ್ಂಗ್ ಕಾಲೇಜಿನ ಆಡಳಿತಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಜಾನ್ಸನ್ ಕುಂದರ್ ಮೇಲೆ ಮೇ 26 ರಂದು ಇಬ್ಬರು ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತನೆ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅರೋಪಿಸಲಾಗಿದೆ. ಆಗಸ್ಟ್ 30 ರಂದು ದೂರು ನೀಡಿದ ಹಿನ್ನಲೆಯಲ್ಲಿ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸದ್ಯ ಅರೋಪಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
Advertisement
Advertisement
ಇತ್ತೀಚಿಗೆ ಜಾನ್ಸನ್ ಅವರನ್ನು ಆಸ್ಪತ್ರೆ ಆಡಳಿತ ಮಂಡಳಿ ಆಡಳಿತಾಧಿಕಾರಿ ಹುದ್ದೆಯಿಂದಲೂ ವಜಾ ಮಾಡಲಾಗಿದೆ. ಹಣದ ವ್ಯವಹಾರದಲ್ಲಿ ಸಹ ಅವ್ಯವಹಾರ ಮಾಡಿದ್ದಾರೆಂಬ ಆರೋಪ ಕೇಳಿ ಬಂದ ಕಾರಣ ಅವರನ್ನು ಈ ಹುದ್ದೆಯಿಂದ ವಜಾ ಮಾಡಿ ಕೆಳಗೆ ಇಳಿಸಲಾಗಿದೆ. ಇನ್ನು ನರ್ಸಿಂಗ್ ವಿದ್ಯಾರ್ಥಿಗಳ ಶುಲ್ಕ ಕಡಿಮೆ ಮಾಡುವ ವಿಷಯವನ್ನೇ ಬಂಡವಾಳ ಮಾಡಿಕೊಂಡು ಇಬ್ಬರು ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತನೆ ಮಾಡಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾರೆ ಎಂದು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಮೋದಿ ತಿಂಗಳಿಗೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ – ಪ್ರಚಾರಕ್ಕೂ ಬರುತ್ತಾರೆ: ಬಿಎಸ್ವೈ
ಆದರೆ ಕಾಲೇಜಿನ ಪ್ರಾಂಶುಪಾಲರು ಸೇರಿ ಕೆಲವರು ಪೊಲೀಸ್ ಠಾಣೆಗೆ ತೆರಳಿ ಈ ಆರೋಪ ಸುಳ್ಳು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಜಾನ್ಸನ್ ಪರ ಸಮುದಾಯದ ಕೆಲವು ಮುಖಂಡರು ಬ್ಯಾಟಿಂಗ್ ಮಾಡುತ್ತಿದ್ದು, ಜಾನ್ಸನ್ ಖಾಸಗಿ ಆಸ್ಪತ್ರೆಗೆ ಆಡಳಿತಾಧಿಕಾರಿಯಾಗಿ ಬಂದ ನಂತರ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅದನ್ನು ಸಹಿಸದೆ ಕೆಲವು ಹಿರಿಯರು ಆಸ್ತಿಪಾಸ್ತಿಯನ್ನು ನುಂಗಿ ಹಾಕಲು ಸಂಚು ಮಾಡಿದ್ದು, ಜಾನ್ಸನ್ ಅವರನ್ನು ಹೊರಹಾಕಲು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.