ಚಂಡೀಗಢ: ಜ್ಯೂನಿಯರ್ ಅಥ್ಲೆಟಿಕ್ಸ್ ಕೋಚ್ ನೀಡಿದ ದೂರಿನ ಆಧಾರದ ಮೇಲೆ ಹರಿಯಾಣದ (Haryana) ಕ್ರೀಡಾ ಸಚಿವ ಸಂದೀಪ್ ಸಿಂಗ್ (Sandeep Singh) ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕೊಲೆ ಬೆದರಿಕೆ ಪ್ರಕರಣವನ್ನು ಚಂಡೀಗಢ ಪೊಲೀಸರು ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಕ್ರೀಡಾ ಸಚಿವ ಸಂದೀಪ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ (Resign) ನೀಡಿದರು.
ಈ ಬಗ್ಗೆ ಮಾತನಾಡಿದ ಅವರು, ತಮ್ಮ ಹೆಸರನ್ನು ಹಾಳು ಮಾಡುವ ಯತ್ನ ನಡೆಯುತ್ತಿದೆ. ನನ್ನ ವಿರುದ್ಧ ಹೊರಿಸಲಾಗಿರುವ ಸುಳ್ಳು ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಈ ತನಿಖೆಯ ವರದಿ ಬರುವವರೆಗೆ ಕ್ರೀಡಾ ಇಲಾಖೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿಗೆ ಹಸ್ತಾಂತರಿಸುತ್ತೇನೆ ಎಂದು ತಿಳಿಸಿದರು.
Advertisement
Advertisement
ಈ ಮೊದಲು ವಿರೋಧ ಪಕ್ಷವಾದ ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‍ಎಲ್‍ಡಿ) ಕಚೇರಿಯಲ್ಲಿ ಸಂತ್ರಸ್ತೆ ಪತ್ರಿಕಾಗೋಷ್ಠಿ ನಡೆಸಿ, ಮನೋಹರ್ ಲಾಲ್ ಖಟ್ಟರ್ ಸರ್ಕಾರವು ಸಂದೀಪ್ ಸಿಂಗ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿದ್ದರು.
Advertisement
ಕಳೆದ ವರ್ಷ ಫೆಬ್ರವರಿಯಿಂದ ನವೆಂಬರ್‌ವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ಅಶ್ಲೀಲ ಮೆಸೇಜ್‍ಗಳನ್ನು ಕಳುಹಿಸುವ ಮೂಲಕ ಸಚಿವರು ಕಿರುಕುಳ ನೀಡಿದ್ದಾರೆ. ಅಷ್ಟೇ ಅಲ್ಲದೇ ಅವರು ತನ್ನನ್ನು ಅನುಚಿತವಾಗಿ ಮುಟ್ಟಿದ್ದರು. ನಿರಂತರ ಕಿರುಕುಳದಿಂದಾಗಿ ಸಾಮಾಜಿಕ ಜಾಲತಾಣವನ್ನು ತೊರೆಯಬೇಕಾಯಿತು ಎಂದು ಆರೋಪಿಸಿದರು. ಇದನ್ನೂ ಓದಿ: `ನಂದಿನಿ’ ಕನ್ನಡಿಗರ ಜೀವನಾಡಿ, ಅದರ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ HDK ಎಚ್ಚರಿಕೆ
Advertisement
ದೂರು ನೀಡಿರುವ ಮಹಿಳೆ, ಸಂದೀಪ್ ಸಿಂಗ್ ತನ್ನನ್ನು ಮೊದಲಿಗೆ ಜಿಮ್‍ವೊಂದರಲ್ಲಿ ನೋಡಿದ್ದರು ಹಾಗೂ ಬಳಿಕ ಇನ್‍ಸ್ಟಾಗ್ರಾಮ್‍ನಲ್ಲಿ ಸಂಪರ್ಕಿಸಿದ್ದರು ಎಂದಿದ್ದಾರೆ. ಅಷ್ಟೇ ಅಲ್ಲದೇ ಸಚಿವರು ಭೇಟಿಯಾಗುವಂತೆ ಆಗಾಗ್ಗೆ ಕೇಳುತ್ತಿದ್ದರು. ನನಗೆ ಇನ್‍ಸ್ಟಾಗ್ರಾಮ್‍ನಲ್ಲಿ ಸಂದೇಶ ಕಳುಹಿಸಿದ್ದ ಅವರು, ನನ್ನ ನ್ಯಾಷನಲ್ ಗೇಮ್ಸ್ ಸರ್ಟಿಫಿಕೇಟ್ ಬರಬೇಕಿದ್ದು, ಆ ಸಂಬಂಧ ಭೇಟಿ ಮಾಡಬೇಕು ಎಂದಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ ವೇಳೆ ಕಿರಿಕ್ – ಸ್ನೇಹಿತರಿಂದಲೇ ಯುವಕನ ಕೊಲೆ