Connect with us

Bagalkot

ಹೈಸ್ಕೂಲ್ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡ ಶಾಲಾ ಸಹಾಯಕ

Published

on

ಬಾಗಲಕೋಟೆ: ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಶಾಲೆಯ ಸಹಾಯಕಯೊಬ್ಬ ಲೈಂಗಿಕವಾಗಿ ಬಳಸಿಕೊಂಡಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅನ್ನದಾನೇಶ್ವರ ಪ್ರೌಢಶಾಲೆಯ ಪಿಯುನ್ ಖಾದ್ರಿ ಭಾಷಾ, ತಾನು ಕಾರ್ಯನಿರ್ವಹಿಸುತ್ತಿದ್ದ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇದಕ್ಕೆ ಆತ ಮತ್ತು ವಿದ್ಯಾರ್ಥಿನಿ ಇಬ್ಬರು ನಡೆಸಿದ ಮೊಬೈಲ್ ಮಾತುಕತೆಯ ಸಂಭಾಷಣೆ ಆಡಿಯೋ ಸಾಕ್ಷಿಯಾಗಿದೆ.

ಭಾಷಾ ಹಾಗೂ ವಿದ್ಯಾರ್ಥಿನಿ ನಡೆಸಿದ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಇನ್ನು ಈ ಸುದ್ದಿ ತಿಳಿಯುತ್ತಿದ್ದಂತೆ ಪಿಯುನ್ ಖಾದ್ರಿ ಭಾಷಾನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಅಲ್ಲದೇ ಶಾಲಾ ಆಡಳಿತ ಮಂಡಳಿ ಸಭೆ ಸೇರಿ ಆತನನ್ನು ಕೆಲಸದಿಂದ ವಜಾ ಮಾಡುವ ನಿರ್ಧಾರ ಮಾಡಿದ್ದಾರೆ. ಈ ನಡುವೆ ಖಾದ್ರಿ ಭಾಷಾ ತಪ್ಪೊಪ್ಪಿಗೆ ಪತ್ರ ಬರೆದಿದ್ದು, ನಾನು ತಪ್ಪು ಮಾಡಿದ್ದೇನೆ ಇನ್ನು ಮುಂದೆ ಹೀಗಾಗೋದಿಲ್ಲ ಎಂದು ತನ್ನ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪರಾರಿಯಾಗಿದ್ದಾನೆ.

ಈ ಕುರಿತು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂದೆ ಸಭೆ ನಡೆಸಿ ಶಾಲೆ ಮತ್ತು ಗ್ರಾಮದ ಮರ್ಯಾದೆ ಹೋಗುತ್ತದೆ ಎಂದು ಪ್ರಕರಣವನ್ನು ಹೊರಬಾರದಂತೆ ತಡೆಯುವ ಪ್ರಯತ್ನ ಮಾಡಿದ್ದಾರೆ. ಆದರೂ ಈ ಆಡಿಯೋ ಫೋನ್‍ಗಳಲ್ಲಿ ಹರಿದಾಡುತ್ತಿದ್ದು ವೈರಲ್ ಆಗಿದೆ. ಮುಗ್ಧ ಮನಸ್ಸಿನ ಬಾಲಕಿಯನ್ನು ಸಹಾಯಕ ಪುಸಲಾಯಿಸಿ ಮಾತಿನಲ್ಲಿ ಮರಳು ಮಾಡಿ ಲೈಂಗಿಕವಾಗಿ ಬಳಸಿಕೊಂಡು ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದು ಬಹಿರಂಗವಾಗಿದೆ. ಆದರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಬಾಲಕಿಯ ಭವಿಷ್ಯದ ದೃಷ್ಟಿಯಿಂದ ಈ ವಿಷಯವನ್ನು ಮುಕ್ತಾಯ ಮಾಡಲು ಗ್ರಾಮಸ್ಥರು ಮತ್ತು ಶಾಲಾ ಆಡಳಿತ ಮಂಡಳಿ ತೀರ್ಮಾನಿಸಿದೆ.

Click to comment

Leave a Reply

Your email address will not be published. Required fields are marked *