ಯಾದಗಿರಿ: ಕಾಮುಕ ಶಿಕ್ಷಕನ ಕಾಟಕ್ಕೆ ಬೇಸತ್ತ ವಿದ್ಯಾರ್ಥಿನಿಯರು, ಶಿಕ್ಷಕನ ವಿರುದ್ಧ ಎಫ್ ಐಆರ್ ದಾಖಲಿಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ತಾಲೂಕಿನ ಮುಂಡರಗಿಯ ಹೊರಭಾಗದ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಭಾರ ಮುಖ್ಯ ಗುರು ಹಯ್ಯಾಳಪ್ಪ ಜಾಗೀರದಾರ ವಿರುದ್ಧ ಪೋಸ್ಕೊ ಕಾಯ್ದೆಯಡಿ ಯಾದಗಿರಿ ಮಹಿಳಾ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
Advertisement
Advertisement
ಶಿಕ್ಷಕ ಹೈಯಾಳಪ್ಪ ವಿದ್ಯಾರ್ಥಿನಿಯರಿಗೆ ಅಂತರಿಕ ಅಂಕಗಳನ್ನು ಹೆಚ್ಚು ನೀಡುತ್ತೇನೆ. ನಾನು ಹೇಳಿದ ಹಾಗೆ ಕೇಳಿ ಅಂತ ಆಮಿಷಯೊಡ್ಡಿ ವಿದ್ಯಾರ್ಥಿನಿಯರ ಕೈಹಿಡಿದು ಎಳೆದಾಡಿ ಲೈಂಗಿಕ ದೌರ್ಜನ್ಯ ವೆಸಗಲು ಯತ್ನಿಸಿದ್ದಾರೆ ಅಂತ ಆರೋಪ ಕೇಳಿ ಬಂದಿತ್ತು. ಇದನ್ನೂ ಓದಿ: ಮನೆಯಲ್ಲಿದ್ರೆ ಮಕ್ಕಳ ಸಂಖ್ಯೆ ಹೆಚ್ಚಾಗುತ್ತೆ ಅನ್ನೋ ಭಯವಿದೆ: ಸೈಫ್ ಆಲಿ ಖಾನ್
Advertisement
ಈ ಸಂಬಂಧ ಶಾಲೆಗೆ ಭೇಟಿ ಈ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಶಿಕ್ಷಕನ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಶಿಕ್ಷಕ ಹಯ್ಯಾಳಪ್ಪ ತಲೆ ಮರೆಸಿಕೊಂಡಿದ್ದಾನೆ.