ಮುಂಬೈ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಬಾನಾ ಅಜ್ಮಿ ಅವರ ಕಾರ್ ಚಾಲಕನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.
ಶನಿವಾರ ಮಧ್ಯಾಹ್ನ ಮುಂಬೈ-ಪುಣೆ ಹೆದ್ದಾರಿಯಲ್ಲಿ ಶಬಾನಾ ಅಜ್ಮಿ ಪ್ರಯಾಣಿಸುತ್ತಿರುವ ಕಾರ್ ಅಪಘಾತಕ್ಕೊಳಗಾಗಿತ್ತು. ಕಾರ್ ಚಾಲಕನನ್ನು ಅಮ್ಲೆಶ್ ಯೋಗೇಂದ್ರ ಕಾಮತ್ ಎಂದು ಗುರುತಿಸಲಾಗಿದ್ದು, ಅಪಘಾತಕ್ಕೊಳಗಾದ ಲಾರಿಯ ಚಾಲಕ ರಾಜೇಶ್ ಪಾಂಡುರಂಗ ಶಿಂಧೆ ಅವರು ಶಬಾನಾ ಅಜ್ಮಿ ಅವರ ಕಾರ್ ಚಾಲಕನ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನೆಲೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
Advertisement
ಚಾಲಕನ ರ್ಯಾಶ್ ಡ್ರೈವಿಂಗ್ (ಅತಿಯಾದ ವೇಗ)ನಿಂದಾಗಿ ಈ ಅಪಘಾತ ಸಂಭಿಸಿದೆ. ಪುಣೆ-ಮುಂಬೈ ಹೈ ವೇಯಲ್ಲಿ ಚಲಿಸುತ್ತಿದ್ದ ಲಾರಿಗೆ ಕಾರು ಗುದ್ದಿದೆ ಎಂದು ಎಫ್‍ಐಆರ್‍ನಲ್ಲಿ ದಾಖಲಿಸಲಾಗಿದೆ.
Advertisement
ಘಟನೆ ಸಂಭವಿಸುತ್ತಿದ್ದಂತೆ ಶಬಾನಾ ಅಜ್ಮಿಯವರನ್ನು ತಕ್ಷಣವೇ ನವಿ ಮುಂಬೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಅಂಧೇರಿಯಲ್ಲಿನ ಕೋಕಿಲಾಬೆನ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಕುರಿತು ವೈದ್ಯರು ಮಾಹಿತಿ ನೀಡಿ, ಅಜ್ಮಿಯವರ ತಲೆಗೆ ಪೆಟ್ಟು ಬಿದ್ದಿದೆ. ಅಲ್ಲದೆ ಬೆನ್ನು ಮೂಳೆಗೆ ಹಾನಿಯಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಈ ಕುರಿತು ಶಬಾನಾ ಅಜ್ಮಿ ಪತಿ, ಸಾಹಿತಿ, ಜಾವೇದ್ ಅಖ್ತರ್ ಪ್ರತಿಕ್ರಿಯಿಸಿ, ಪತ್ನಿಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.
ನಟಿ ಶಬನಾ ಅಜ್ಮಿಯವರು ಪ್ರಯಾಣಿಸುತ್ತಿದ್ದ ಕಾರು ಮುಂಬೈ-ಪುಣೆ ಎಕ್ಸ್‍ಪ್ರೆಸ್ ವೇಯಲ್ಲಿ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಶನಿವಾರ ಮಧ್ಯಾಹ್ನ 3.30ಕ್ಕೆ ಅಪಘಾತಕ್ಕೀಡಾಗಿತ್ತು. ಅಜ್ಮಿಯವರು ಪ್ರಯಾಣಿಸುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿತ್ತು. ಅವರನ್ನು ಎಂಜೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಕೋಕಿಲಾಬೆನ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
The news of @AzmiShabana Ji’s injury in an accident is distressing. I pray for her quick recovery.
— Narendra Modi (@narendramodi) January 18, 2020
ಅಪಘಾತ ಸುದ್ದಿ ತಿಳಿದ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದರು.