ಬಾಲಿವುಡ್‌ನ ಖ್ಯಾತ ನಟಿ ಶಬಾನಾ ಅಜ್ಮಿ (Shabana Azmi) ಅವರು ಹೆಚ್1ಎನ್1 (H1N1) ಕಾಯಿಲೆಯಿಂದ ಬಳಲುತ್ತಿದ್ದಾರಂತೆ. ಕಾಕ್ರೋಚ್ ಜನತಾ ಪಾರ್ಟಿ ಹೋರಾಟದಲ್ಲಿ ಸಕ್ರಿಯರಾಗಿದ್ದ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದೆ. ಅಂದುಕೊಂಡಂತೆ ಆಗಿದ್ದರೆ ಇಂದು ಅವರು ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗಿ ಆಗಬೇಕಿತ್ತು. ಅನಾರೋಗ್ಯದ ಕಾರಣದಿಂದಾಗಿ ಅವರು ಭಾಗಿ ಆಗಲಿಲ್ಲ.
ಈ ಕುರಿತಂತೆ ಅವರ ತಂಡವೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದು, ಶಬಾನಾ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಅವರಿಗೆ ಈಗ 102 ಡಿಗ್ರಿ ಜ್ವರವಿದ್ದು, ಆ ಕಾರಣದಿಂದಾಗಿ ಪ್ರತಿಭಟನೆಯಲ್ಲಿ ಭಾಗಿ ಆಗಲು ಆಗಲಿಲ್ಲ ಅಂತ ಹೇಳಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವ ಕುರಿತು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: `ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಚಿತ್ರದ ಟೀಸರ್ ರಿಲೀಸ್
ಜಂತರ್ ಮಂತರ್‌ನಲ್ಲಿ ನಡೆದ ಹೋರಾಟದಲ್ಲಿ ಭಾಗಿ ಆದಾಗಲೇ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೂ ದಾಖಲಿಸಲಾಗಿತ್ತು. ಇದೀಗ ಹಂದಿ ಜ್ವರ ಬಂದಿರೋದು ಪತ್ತೆ ಆಗಿದೆ. ಹಾಗಾಗಿ, ವಿಶ್ರಾಂತಿ ಪಡೆದುಕೊಳ್ಳುವಂತೆ ನಟಿಗೆ ವೈದ್ಯರು ಸೂಚಿಸಿದ್ದಾರೆ.
