ಹ್ಯಾಂಗ್‌ಜೂ: ಚೀನಾದ ಹ್ಯಾಂಗ್‌ಜೂನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ (Asian Games 2023) ಭಾರತೀಯ ಮಹಿಳಾ ತಂಡದ ಆಟಗಾರ್ತಿ ಶಫಾಲಿ ವರ್ಮಾ (Shafali Verma) ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
.@TheShafaliVerma was a class act with the bat in the 19th #AsianGames quarter-final ????????
React to her ????innings in one emoji ????#SonySportsNetwork #Hangzhou2022 #TeamIndia #Cheer4India #IssBaarSauPaar pic.twitter.com/v7TVVeKB9K
— Sony Sports Network (@SonySportsNetwk) September 21, 2023
Advertisement
ಹ್ಯಾಂಗ್‌ಜೂನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿಂದು (ಗುರುವಾರ) ನಡೆದ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಮತ್ತು ಮಲೇಷ್ಯಾ ಮಹಿಳಾ ಕ್ರಿಕೆಟ್ (Malaysia Womens Team) ತಂಡಗಳ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಆದ್ರೆ ಈ ಪಂದ್ಯದಲ್ಲಿ ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾ ಪರ ಶಫಾಲಿ ವರ್ಮಾ 31 ಎಸೆತಗಳಲ್ಲಿ 51 ರನ್ ಬಾರಿಸುವ ಮೂಲಕ ಏಷ್ಯನ್ ಗೇಮ್ಸ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
Advertisement
Advertisement
ಆರಂಭಿಕರಾಗಿ ಕಣಕ್ಕಿಳಿದ ಶಫಾಲಿ ವರ್ಮಾ 171.79 ಸ್ಟ್ರೈಕ್‌ರೇಟ್ ಬ್ಯಾಟ್ ಬೀಸಿ 39 ಎಸೆತಗಳಲ್ಲಿ 67 ರನ್ (5 ಸಿಕ್ಸರ್, 4 ಬೌಂಡರಿ) ಚಚ್ಚಿದರು. ಈ ಮೂಲಕ ಏಷ್ಯನ್ ಗೇಮ್ಸ್ ಕ್ರಿಕೆಟ್ ಇತಿಹಾಸದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಮಹಿಳಾ ಆಟಗಾರ್ತಿ ಎಂಬ ಕೀರ್ತಿಗೆ ಪಾತ್ರರಾದರು. ಇದನ್ನೂ ಓದಿ: ಏಷ್ಯನ್ ಗೇಮ್ಸ್: ಭಾರತ-ಮಲೇಷ್ಯಾ ಪಂದ್ಯ ರದ್ದು, ಕ್ವಾರ್ಟರ್ ಫೈನಲ್‍ಗೆ ಜಿಗಿದ ಟೀಂ ಇಂಡಿಯಾ
Advertisement
ಈ ಪಂದ್ಯದಲ್ಲಿ ಭಾರತ 5.4 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 60 ರನ್ ಗಳಿಸಿದ್ದಾಗ ಮಳೆ ಅಡ್ಡಿಯಾಯಿತು. ಆದ್ದರಿಂದ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಪಂದ್ಯವನ್ನ 15 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಸ್ಮೃತಿ ಮಂಧಾನ (Smriti Mandhana) 27 ರನ್ ಗಳಿಸಿದ್ರೆ, ಸೋಟಕ ಆರಂಭ ನೀಡಿದ ಶಫಾಲಿ ವರ್ಮಾ 67 ರನ್ ಚಚ್ಚಿದರು. ಇದರೊಂದಿಗೆ ಜೆಮಿಮಾ ರೊಡ್ರಿಗಸ್ ಅಜೇಯ 47 ರನ್ (29 ಎಸೆತ, 6 ಬೌಂಡರಿ) ಹಾಗೂ ರಿಷಾ ಘೋಷ್ ಕೇವಲ 7 ಎಸೆತಗಳಲ್ಲಿ ಸ್ಫೋಟಕ 21 ರನ್ (3 ಬೌಂಡರಿ, 1 ಸಿಕ್ಸರ್) ಚಚ್ಚಿ ತಂಡದ ಮೊತ್ತ 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಭಾರತ ನಿಗದಿತ 15 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ ಭಾರತ 173 ರನ್ ಕಲೆಹಾಕಿತು. ಇದನ್ನೂ ಓದಿ: ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ – ಕೆ.ಎಲ್ ರಾಹುಲ್‌ಗೆ ನಾಯಕತ್ವ, ಸೂರ್ಯನಿಗೂ ಚಾನ್ಸ್
ಈ ಗುರಿ ಬೆನ್ನಟ್ಟಿದ ಮಲೇಷ್ಯಾ ಇನಿಂಗ್ಸ್ ಆರಂಭಿಸುತ್ತಿದ್ದಂತೆಯೇ ಮತ್ತೆ ಮಳೆ ಸುರಿಯಲಾರಂಭಿಸಿತು. ಮಲೇಷ್ಯಾ ತಂಡ ಕೇವಲ ಎರಡು ಎಸೆತಗಳನ್ನು ಎದುರಿಸಿದ್ದಾಗ ಮಳೆ ಆರಂಭವಾಯಿತು. ಭಾರೀ ಮಳೆಯ ಕಾರಣ ಪಂದ್ಯವು ಫಲಿತಾಂಶವಿಲ್ಲದೆ ರದ್ದಾಯಿತು. ಭಾರತ ಉತ್ತಮ ರನ್‌ರೇಟ್ ಹೊಂದಿದ್ದ ಕಾರಣ ಸೆಮಿಫೈನಲ್ ಪ್ರವೇಶಿಸಿತು.
Web Stories