ಮುಂಬೈ: ಶಫಾಲಿ ವರ್ಮಾ (Shafali Verma) ಸ್ಫೋಟಕ ಅರ್ಧ ಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಗುಜರಾತ್ ಜೈಂಟ್ಸ್ (Gujarat Giants) ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಟಾಸ್‌ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 105 ರನ್ ಗಳಿಸಿತ್ತು. 106 ರನ್‌ಗಳ ಅಲ್ಪಮೊತ್ತದ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೇವಲ 7.1 ಓವರ್‌ಗಳಲ್ಲೇ 107 ರನ್ ಚಚ್ಚಿ ಗೆಲುವು ಸಾಧಿಸಿತು.
Advertisement
Advertisement
ಶಫಾಲಿ ವರ್ಮಾ ಆರಂಭದಿಂದಲೇ ಗುಜರಾತ್ ಬೌಲರ್‌ಗಳನ್ನ ಬೆಂಡೆತ್ತಲು ಶುರು ಮಾಡಿ, ಕೇವಲ 18 ಎಸೆತಗಳಲ್ಲೇ ಸ್ಫೋಟಕ ಅರ್ಧಶತಕ ಸಿಡಿಸಿದ್ದರು. 271.42 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಶಫಾಲಿ 28 ಎಸೆತಗಳಲ್ಲಿ 76 ರನ್ (10 ಬೌಂಡರಿ, 5 ಸಿಕ್ಸರ್) ಚಚ್ಚಿದರು. ಇದಕ್ಕೆ ಜೊತೆಯಾದ ನಾಯಕಿ ಮೆಗ್ ಲ್ಯಾನಿಂಗ್ (Meg Lanning) 15 ಎಸೆತಗಳಲ್ಲಿ 21 ರನ್ ಗಳಿಸುವ ಮೂಲಕ ಸಾಥ್ ನೀಡಿದರು. ಅಂತಿಮವಾಗಿ ಕೇವಲ 7.1 ಓವರ್ ಗಳಲ್ಲಿ 107 ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
Advertisement
Advertisement
ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಆಲ್‌ರೌಂಡರ್ ಮಾರಿಜಾನ್ನೆ ಕಪ್ (Marizanne Kapp) ತೀವ್ರ ಆಘಾತ ನೀಡಿದರು. ಇದನ್ನೂ ಓದಿ: ಸೋಲಿನ ಹೊಣೆ ನಾನೇ ಹೊರುತ್ತೇನೆ – ತನ್ನನ್ನು ತಾನೇ ಟೀಕಿಸಿಕೊಂಡ ಸ್ಮೃತಿ ಮಂದಾನ
ಆರಂಭದಲ್ಲೆ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ಗುಜರಾತ್ 33 ರನ್ ಗಳಾಗುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಜಾರ್ಜಿಯಾ ವಾರೆಹಾಮ್ 22 ರನ್, ಕಿಮ್ ಗಾರ್ತ್ 32 ರನ್ ಗಳಿಸುವ ಮೂಲಕ ತಂಡ 100 ರನ್‌ಗಳ ಗಡಿ ದಾಟಲು ನೆರವಾದರು. ಇದನ್ನೂ ಓದಿ: ಗಿಲ್ ಶತಕದ ಮಿಂಚು, ಬ್ಯಾಟಿಂಗ್ ಲಯಕ್ಕೆ ಮರಳಿದ ಕೊಹ್ಲಿ ಅರ್ಧ ಶತಕ – ಉತ್ತಮ ಸ್ಥಿತಿಯಲ್ಲಿ ಭಾರತ
ಡೆಲ್ಲಿ ಕ್ಯಾಪಿಟಲ್ಸ್ ಪರ ಮಾರಿಜಾನ್ನೆ ಕಪ್ 4 ಓವರ್ ಗಳಲ್ಲಿ ಕೇವಲ 15 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರೆ, ಶಿಖಾ ಪಾಂಡೆ 3 ವಿಕೆಟ್, ರಾಧಾ ಯಾದವ್ 1 ವಿಕೆಟ್ ಪಡೆದರು.