ಮಂಗಳೂರು: ಜಿಲ್ಲಾ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಕೊಲೆಯಾದ ದಿನ ಶಫೀಕ್ ಮನೆಯಲ್ಲಿದ್ದ. ಒಂದು ಕಾರ್ಯಕ್ರಮದಲ್ಲಿ ಆತ ಪಾಲ್ಗೊಂಡಿದ್ದ ಎಂದು ತಂದೆ ಇಬ್ರಾಹಿಂ ಹೇಳಿದ್ದಾರೆ.
Advertisement
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ಮಗ ಕೊಲೆ ಮಾಡಿಲ್ಲ ಆತ ಅಪರಾಧಿಯಲ್ಲ. ವಿಚಾರಣೆ ಅಂತ ಪೊಲೀಸರು ಮನೆಯಿಂದ ಕರೆದುಕೊಂಡು ಬಂದಿದ್ದಾರೆ. ನಾನು ಪ್ರವೀಣ್ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದೆ. ಮೂರು ತಿಂಗಳ ಹಿಂದೆ ನಾನು ಕೆಲಸವನ್ನು ಬಿಟ್ಟಿದ್ದೇನೆ ಎಂದರು. ಇದನ್ನೂ ಓದಿ: ನಿಜವಾದ ಆರೋಪಿಯನ್ನು ಬಂಧಿಸಿ ನನ್ನ ಪತಿಯನ್ನು ಬಿಟ್ಟುಬಿಡಿ: ಶಫೀಕ್ ಪತ್ನಿ ಅನ್ಶಿಫಾ
Advertisement
Advertisement
ನಿಜವಾದ ಆರೋಪಿ ಯಾರೆಂದು ಪೊಲೀಸರು ಹುಡುಕಲಿ. ವಿಚಾರಣೆಗೆ ಕರೆದುಕೊಂಡು ಬಂದು ಕೊಲೆ ಮಾಡಿದ್ದಾನೆ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಪ್ರವೀಣ್ ಹತ್ಯೆ ಸಂಬಂಧ ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಶಫೀಕ್ ಬಂಧನ ಹಿನ್ನೆಲೆಯಲ್ಲಿ ಕುಟುಂಬಸ್ಥರು ಬೆಳ್ಳಾರೆ ಪೊಲೀಸ್ ಠಾಣೆಗೆ ಬಂದಿದ್ದಾರೆ.