ಕಾಬುಲ್: ಮ್ಯಾಚ್ ಫಿಕ್ಸಿಂಗ್ ಆರೋಪದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ (ಎಸಿಬಿ) ತನ್ನ ತಂಡದ ಸ್ಟಾರ್ ಕ್ರಿಕೆಟ್ ಆಟಗಾರ ಶಫಿಕುಲ್ಲಾ ಶಫಾಕ್ ಮೇಲೆ 6 ವರ್ಷ ಅಮಾನತು ಶಿಕ್ಷೆ ವಿಧಿಸಿದೆ.
ಅಫ್ಘಾನಿಸ್ತಾನ ಪ್ರೀಮಿಯರ್ ಲೀಗ್ 2018ರ ಆವೃತ್ತಿ ಹಾಗೂ 2019ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ನಲ್ಲಿ ಶಫಾಕ್ ಮ್ಯಾಚ್ ಫಿಕ್ಸಿಂಗ್ ನಡೆಸಿದ್ದ ಪರಿಣಾಮ ಆತನ ವಿರುದ್ಧ ಐಸಿಸಿ ನಿಯಮ 2.1.1ರ ಅನ್ವಯ ನಿಷೇಧ ವಿಧಿಸಲಾಗಿದೆ ಎಂದು ಎಸಿಬಿ ಮಾಹಿತಿ ನೀಡಿದೆ.
Advertisement
National team player Shafiqullah Shafaq has been banned from all forms of cricket for a period of six years after he accepted four charges related to the breaching of the ACB Anti-Corruption Code.
More: https://t.co/TuYaqGUQTk pic.twitter.com/nKYg3W1yBk
— Afghanistan Cricket Board (@ACBofficials) May 10, 2020
Advertisement
ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳಲು ವಿವಿಧ ರೀತಿ ಪ್ರಯತ್ನ ನಡೆಸಿದ್ದು ಮಾತ್ರವಲ್ಲದೇ, ಬುಕ್ಕಿಗಳು ಸಂಪರ್ಕ ಮಾಡಿದ್ದರು ಉದ್ದೇಶ ಪೂರ್ವಕವಾಗಿ ಬೋರ್ಡಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ದೇಶವನ್ನು ಪ್ರತಿನಿಧಿಸಿದ್ದ ಆಟಗಾರ ಫಿಕ್ಸಿಂಗ್‍ನಲ್ಲಿ ಪಾಲ್ಗೊಂಡಿರುವುದಕ್ಕೆ ಬೋರ್ಡ್ ಅಸಮಾಧಾನ ವ್ಯಕ್ತಪಡಿಸಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ 30 ವರ್ಷದ ಶಫಾಕ್ ದೇಶದ ಪರ ಅಂತಿಮ ಪಂದ್ಯವನ್ನಾಡಿದ್ದು, ಇದುವರೆಗೂ 24 ಏಕದಿನ, 46 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದರು.
Advertisement
ವಿಶ್ವ ಕ್ರಿಕೆಟ್‍ನಲ್ಲಿ ಅಫ್ಘಾನಿಸ್ತಾನದ ರಶೀದ್ ಖಾನ್, ಮೊಹಮ್ಮದ್ ನಬಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದರು. ಈ ಇಬ್ಬರು ಆಟಗಾರರ ಬಳಿಕ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಆಗಿರುವ ಶಫಾಕ್ ಸ್ಟಾರ್ ಕ್ರಿಕೆಟಿಗ ಎಂದು ಗುರುತಿಸಿಕೊಂಡಿದ್ದರು. ದೇಶಿಯ ಕ್ರಿಕೆಟ್‍ನಲ್ಲಿರುವಾಗಲೇ ಟಿ20 ಮಾದರಿಯಲ್ಲಿ ಕೇವಲ 71 ಎಸೆತಗಳಲ್ಲಿ 214 ರನ್ ಸಿಡಿಸಿದ್ದರು.