ಮುಂಬೈ: ಬಾಲಿವುಡ್ ನಟ ಶಾರೂಖ್ ಖಾನ್ ಅವರ ಮನೆಯನ್ನು ಸ್ಫೋಟಿಸುತ್ತೇನೆ ಎಂದು ಬೇದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
2022 ಜನವರಿ 6 ರಂದು ಮಹಾರಾಷ್ಟ್ರದ ಪೊಲೀಸ್ ಕಂಟ್ರೋಲ್ ರೂಮ್‍ಗೆ ಫೋನ್ ಕರೆ ಮಾಡಿದ್ದನು. ಈ ವೇಳೆ ಶಾರೂಖ್ ಅವರ ಬಂಗಲೆಯನ್ನು ಸ್ಫೋಟ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದನು. ಈ ಪ್ರಕರಣವನ್ನು ಬೆನ್ನತ್ತಿದ್ದ ಮುಂಬೈ ಪೊಲೀಸರ ಬಲೆಗೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ.
ಜಿತೇಶ್ ಬಂಧಿತ ಆರೋಪಿಯಾಗಿದ್ದಾನೆ. ಈತನ ಫೋನ್ ನಂಬರ್ ಟ್ರೆಸ್ ಮಾಡಿದಾಗ ಮಧ್ಯಪ್ರದೇಶದ ಜಬಲ್‍ಪುರದಿಂದ ಕರೆ ಬಂದಿರುವುದು ಪತ್ತೆಯಾಗಿದೆ. ಬಳಿಕ ಕಾರ್ಯಾಚರಣೆಗಿಳಿದ ಪೊಲೀಸರು, ಮಧ್ಯಪ್ರದೇಶದ ಜಬಲ್‍ಪುರದಲ್ಲಿಯೇ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಜಿಎಸ್‍ಟಿ ನೋಟಿಸ್‌ನಲ್ಲಿ ಮೊತ್ತ ನೋಡಿ ಶಾಕ್ ಆದ ದಂಪತಿ!
ಮುಂಬೈನ ವಿವಿಧೆಡೆ ಭಯೋತ್ಪಾದಕ ದಾಳಿ ಹಾಗೂ ಬಾಂಬ್ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ. ಆರೋಪಿಯ ವಿರುದ್ಧ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.