ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡಕ್ಕೆ ಗೌತಮ್ ಗಂಭೀರ್ ಮುಂದಿನ ಮುಖ್ಯಕೋಚ್ (Team India Head Coach) ಆಗುವ ಬಗ್ಗೆ ಮಾತುಕತೆ ನಡೆಯುತ್ತಿರುವಾಗಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಕೆಕೆಆರ್ ತಂಡದ ಸಹ ಮಾಲೀಕರೂ ಆಗಿರುವ ನಟ ಶಾರುಖ್ ಖಾನ್ (Shah Rukh Khan), ಬ್ಲ್ಯಾಂಕ್ ಚೆಕ್ ಆಫರ್ ಕೊಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
17ನೇ ಐಪಿಎಲ್ ಆವೃತ್ತಿಯ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿಯೇ ಮುಂದಿನ 10 ವರ್ಷಗಳ ಕಾಲ ಮುಂದುವರಿಯಲು ಶಾರುಖ್, ಗೌತಮ್ ಗಂಭೀರ್(Gautam Gambhir) ಅವರಿಗೆ ಬ್ಲ್ಯಾಂಕ್ ಚೆಕ್ (Blank Cheque) ಆಫರ್ ನೀಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಂದು ಕ್ಯಾಪ್ಟನ್, ಇಂದು ಮೆಂಟರ್ ಆಗಿ ಟ್ರೋಫಿ ಗೆದ್ದುಕೊಟ್ಟ ಗಂಭೀರ್; ಹಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡ ಬಾದ್ ಷಾ
ಸದ್ಯ ಗೌತಮ್ ಗಂಭೀರ್ ಅವರು ಟೀಂ ಇಂಡಿಯಾ ಮುಖ್ಯಕೋಚ್ ಹುದ್ದೆಗೆ ಆಸಕ್ತಿ ತೋರಿದ್ದಾರೆ. ಆದ್ರೆ ಈವರೆಗೆ ಅರ್ಜಿ ಸಲ್ಲಿಸಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಗಂಭೀರ್ ಅರ್ಜಿ ಸಲ್ಲಿಸಿದರೆ 100% ಅವರು ಹುದ್ದೆಗೆ ಆಯ್ಕೆಯಾಗುತ್ತಾರೆ. ಗಂಭೀರ್ ಮುಂದಿನ ಮುಖ್ಯಕೋಚ್ ಹುದ್ದೆಗೆ ಆಸಕ್ತಿ ಹೊಂದಿರುವುದರಿಂದ ಅವರು ಕೆಕೆಆರ್ ತಂಡವನ್ನು ತೊರೆಯುವ ಬಗ್ಗೆ ಎಸ್‌ಆರ್‌ಕೆ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: IPL 2024: ದಣಿವರಿಯದೇ ದುಡಿದ ಕ್ರೀಡಾ ಸಿಬ್ಬಂದಿಗೆ ತಲಾ 25 ಲಕ್ಷ ರೂ. ಬಹುಮಾನ ಘೋಷಿಸಿದ ಜಯ್ ಶಾ
ಕೋಚ್ ಹುದ್ದೆಗೆ ಆಸಿಸ್ ಆಟಗಾರರನ್ನ ಸಂಪರ್ಕಿಲ್ಲ:
ಇತ್ತೀಚೆಗೆ ಟೀಂ ಇಂಡಿಯಾದ ಮುಖ್ಯಕೋಚ್ ಹುದ್ದೆ ಆಫರ್ ತಿರಸ್ಕರಿಸಿರುವುದಾಗಿ ಆಸೀಸ್ ಕ್ರಿಕೆಟ್ ದಿಗ್ಗಜ ರಿಕಿ ಪಾಂಟಿಂಗ್ ಅವರು ಹೇಳಿದ ಬಳಿಕ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇದಕ್ಕೆ ಸ್ಪಷ್ಟನೆ ನೀಡಿದ್ದರು. ಟೀಂ ಇಂಡಿಯಾದ ಕೋಚ್ ಹುದ್ದೆಗೆ ನಾನು ಯಾವುದೇ ಆಸ್ಟ್ರೇಲಿಯಾ ಆಟಗಾರರನ್ನು ಸಂಪರ್ಕಿಸಿಲ್ಲ. ನಮ್ಮ ರಾಷ್ಟ್ರೀಯ ತಂಡಕ್ಕೆ ಸರಿಯಾದ ತರಬೇತುದಾರನನ್ನು ಹುಡುಕುವುದು ಒಂದು ನಿಖರವಾದ ಮತ್ತು ಸಂಪೂರ್ಣ ಪ್ರಕ್ರಿಯೆಯಾಗಿದೆ. ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆ ಹೊಂದಿರುವ ಮತ್ತು ಶ್ರೇಯಾಂಕಗಳ ಮೂಲಕ ಏರಿದ ವ್ಯಕ್ತಿಗಳನ್ನು ಆಯ್ಕೆ ಮಾಡಲು ನಾವು ಗಮನಹರಿಸಿದ್ದೇವೆ. ಟೀಂ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ನಮ್ಮ ಕೋಚ್ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ ಎಂದು ಹೇಳಿದ್ದರು.
ನವೆಂಬರ್ 2021 ರಿಂದ ದ್ರಾವಿಡ್ (Rahul Dravid) ಕೋಚ್ ಹುದ್ದೆಯನ್ನು ಅಲಂಕರಿಸಿದ್ದು ಪ್ರಸಕ್ತ ವರ್ಷದ ಜೂನ್‌ನಲ್ಲಿ ಅವಧಿ ಅಂತ್ಯವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದೆ. ಇದನ್ನೂ ಓದಿ: T20 World Cup: ಚುಟುಕು ಕ್ರಿಕೆಟ್ ಯುಗದ ಆರಂಭ – ಚೊಚ್ಚಲ ಆವೃತ್ತಿಯಲ್ಲೇ ಭಾರತ ಚಾಂಪಿಯನ್!