CinemaLatestMain PostSandalwood

ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅರೆಸ್ಟ್

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ನನ್ನು ಎನ್‍ಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಐಷಾರಾಮಿ ಹಡಗಿನಲ್ಲಿ ಡ್ರಕ್ಸ್ ಪಾರ್ಟಿ ಮಾಡುತ್ತಿದ್ದಾಗ ಆರ್ಯನ್ ಖಾನ್ ಸಹಿತ 8 ಜನ ಎನ್‍ಸಿಬಿ ಬಲೆಗೆ ಬಿದ್ದಿದ್ದರು. ಇದೀಗ ಆರ್ಯನ್ ಖಾನ್ ಸಹಿತ 8 ಮಂದಿ ಆರೋಪಿಗಳನ್ನು ಎನ್‍ಸಿಬಿ ಅರೆಸ್ಟ್ ಮಾಡಿದೆ. ಆರ್ಯನ್ ಮಾದಕ ವಸ್ತು ಸೇವೆ ಮಾಡಿರೋದು ದೃಢಪಟ್ಟಿದ್ದು, ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದಿದ್ದೇವೆ: ಎನ್‍ಸಿಬಿ ಮುಖ್ಯಸ್ಥ ಪ್ರಧಾನ್

ಈ ಕುರಿತು ಮಾಹಿತಿ ನೀಡಿರುವ ಎನ್‍ಸಿಬಿ ಮುಖ್ಯಸ್ಥ ಎಸ್.ಎನ್.ಪ್ರಧಾನ್, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಪ್ರಯಾಣಿಕರ ಸೋಗಿನಲ್ಲಿ ಟಿಕೆಟ್ ಬುಕ್, ಎನ್‍ಸಿಬಿ ರೋಚಕ ಕಾರ್ಯಾಚರಣೆ

ಸಮುದ್ರದಲ್ಲಿ ಹಡಗಿನಲ್ಲಿ ತೇಲುತ್ತ ಬಾಲಿವುಡ್ ನಟರು, ಉದ್ಯಮಿಗಳ ಮಕ್ಕಳು ಡ್ರಗ್ಸ್ ಪಾರ್ಟಿ ಮಾಡಿದ್ದರು. ಐಷಾರಾಮಿ ಹಡಗಿನಲ್ಲಿ ಎನ್‍ಸಿಬಿ ಕಾರ್ಯಾಚರಣೆಯೇ ರೋಚಕವಾಗಿತ್ತು. ಎನ್‍ಸಿಬಿ ಸಮೀರ್ ವಾಂಖೆಡೆ ಟೀಮ್ ಮಾರುವೇಷದಲ್ಲಿ ಹಡಗಿನಲ್ಲಿ ಪ್ರಯಾಣಿಸಿ ಆಪರೇಷನ್ ನಡೆಸಿತ್ತು. ಕಾರ್ಯಾಚರಣೆಯಲ್ಲಿ ಯಶಸ್ವಿ ಸಹ ಆಗಿದ್ದು, ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಸೇರಿದಂತೆ ಹಲವು ಪ್ರತಿಷ್ಟಿತರ ಮಕ್ಕಳನ್ನು ವಶಕ್ಕೆ ಪಡೆಯಲಾಗಿತ್ತು.

ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಐಷಾರಾಮಿ ಹಡಗಿನಲ್ಲಿ ಸಮುದ್ರದ ಮಧ್ಯದಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಎನ್‍ಸಿಬಿ ಅಧಿಕಾರಿಗಳು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕೊಕೇನ್, ಎನ್‍ಡಿಎಂ, ಹಾಶಿಶ್ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಹೈ ಪ್ರೊಫೈಲ್ ಡ್ರಗ್ಸ್ ಕೇಸ್- ಶಾರುಖ್ ಖಾನ್ ಪುತ್ರನಿಗೆ ಬಂಧನ ಭೀತಿ

Leave a Reply

Your email address will not be published. Required fields are marked *

Back to top button