Cinema

ಇನ್ನೊಂದು ವಾರ ಶಾರೂಖ್ ಮಗನಿಗೆ ಜೈಲೇ ಗತಿ

Published

on

Share this

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ತೀರ್ಪನ್ನು ಮುಂಬೈನ ಎನ್‍ಡಿಪಿಎಸ್ ಕೋರ್ಟ್ ಕಾಯ್ದಿರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮುಂಬೈ ಸೆಷನ್ಸ್ ಕೋರ್ಟ್ ಆರ್ಯನ್ ಜಾಮೀನು ಅರ್ಜಿಯ ತೀರ್ಪನ್ನು ಅ.20 ರಂದು ಪ್ರಕಟಿಸಲಿದೆ. ಈ ಮೂಲಕ ಇನ್ನೊಂದು ವಾರ ಶಾರೂಖ್ ಮಗನಿಗೆ ಜೈಲೇ ಗತಿ ಎನ್ನುವಂತಾಗಿದೆ. ಇದನ್ನೂ ಓದಿ: ಆರ್ಯನ್ ಖಾನ್ ಮೂರು ವರ್ಷದಿಂದ ಡ್ರಗ್ ಸೇವಿಸುತ್ತಿದ್ದಾರೆ – ಎನ್‍ಸಿಬಿ

ಮುಂಬೈ ಸಮುದ್ರದಲ್ಲಿ ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸಿದ ಆರೋಪದಲ್ಲಿ ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ಮತ್ತು ಇತರೆ ಆರೋಪಿಗಳು ಜಾಮೀನು ಕೋರಿ ಮುಂಬೈ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆಯಿಂದ ಈ ಅರ್ಜಿ ವಿಚಾರಣೆ ನಡೆಯುತ್ತಿದ್ದು ನ್ಯಾ.ವಿವಿ ಪಾಟೀಲ್ ಸುದೀರ್ಘ ವಾದ ಆಲಿಸಿದ್ದಾರೆ.

ಇಂದು ವಾದ ಆಲಿಸಿದ ಎನ್‍ಸಿಬಿ ಪರ ವಕೀಲ ಅನೀಲ್ ಸಿಂಗ್, ಆರ್ಯನ್ ಖಾನ್ ನಿಯಮಿತವಾಗಿ ಡ್ರಗ್ ಸೇವನೆ ಮಾಡುತ್ತಿದ್ದಾರೆ. ಮಾಹಿತಿಗಳ ಪ್ರಕರಣ ಮೂರು ವರ್ಷದಿಂದ ಮಾಧಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಬಳಿಕ ಮಾದಕ ವಸ್ತು ಪತ್ತೆಯಾಗಿದ್ದು, ಆರ್ಯನ್ ಖಾನ್ ಕೂಡಾ ಮಾದಕ ವ್ಯಸನಿ ಎನ್ನುವುದು ಸೂಚಿಸುತ್ತಿದೆ ಎಂದು ವಾದಿಸಿದ್ದಾರೆ. ಇದನ್ನೂ ಓದಿ: ಮಗ ಇಲ್ಲದೇ ಹುಟ್ಟುಹಬ್ಬ ಆಚರಿಸಲ್ಲ: ಶಾರೂಖ್ ಪತ್ನಿ ಗೌರಿ ಖಾನ್

ಆರ್ಯನ್ ಖಾನ್ ತಮ್ಮ ಬಳಿ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ವಾದಿಸಬಹುದು, ಆದರೆ ಆತನ ಸ್ನೇಹಿತ ತನ್ನ ಬಳಿ ಡ್ರಗ್ ಇರುವುದು ಒಪ್ಪಿಕೊಂಡಿದ್ದಾನೆ. ಪಂಚೆನಾಮೆಗೂ ಆರೋಪಿಗಳು ಸಹಿ ಮಾಡಿದ್ದಾರೆ. ಎನ್‍ಡಿಪಿಎಸ್ ಕಾಯ್ದೆಯಡಿ ಆರೋಪಿಗಳಿಂದ ಎಷ್ಟು ಪ್ರಮಾಣದ ಮಾದಕ ವಸ್ತುವನ್ನು ವಶಕ್ಕೆ ಪಡೆದೆವು ಎನ್ನುವುದು ಮುಖ್ಯವಲ್ಲ. ಆರೋಪಿಗೆ ಪ್ರಕರಣಕ್ಕಿರುವ ನಂಟನ್ನು ಭೇದಿಸಬೇಕಿದೆ. ಹೀಗಾಗಿ ಇದು ಒಂದು ವರ್ಷದ ಶಿಕ್ಷೆಯ ಪ್ರಕರಣವೂ ಎನ್ನುವಂತಿಲ್ಲ. ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕು, ಯಾರನ್ನು ತನಿಖೆ ಒಳಪಡಿಸಬೇಕು ಅದು ತನಿಖಾಧಿಕಾರಿಯ ಹಕ್ಕು. ಈ ಹಂತದಲ್ಲಿ ಜಾಮೀನು ನೀಡಬಾರದು ಎಂದು ಅನಿಲ್ ಸಿಂಗ್ ಕೋರ್ಟ್ ಗೆ ಮನವಿ ಮಾಡಿಕೊಂಡರು. ಇದನ್ನೂ ಓದಿ: ಮಗನ ಆರೋಗ್ಯ ವಿಚಾರಿಸುತ್ತಾ ರಾತ್ರಿಯಿಡೀ ನಿದ್ದೆಗೆಟ್ಟ ಶಾರೂಖ್ ದಂಪತಿ!

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications