ನವದೆಹಲಿ: ಪಾಕ್ (Pakistan) ತಂಡದ ವೇಗಿ ಶಾಹಿನ್ ಶಾ ಆಫ್ರಿದಿ (Shaheen Afridi) ವಿಶ್ವದ ನಂಬರ್ ಒನ್ ಶ್ರೇಯಾಂಕದ ಬೌಲರ್ ಆಗಿ ಹೊರಹೊಮ್ಮಿದ್ದಾರೆ. ನ.1 ರಂದು ಐಸಿಸಿ ಏಕದಿನ ಶ್ರೇಯಾಂಕದ ಪಟ್ಟಿಯಲ್ಲಿ ಅಫ್ರಿದಿ ಅಗ್ರ ಸ್ಥಾನಕ್ಕೆ ಏರಿದ್ದಾರೆ. ತಮ್ಮ ಕ್ರಿಕೆಟ್ ಜೀವನದಲ್ಲಿ ಇದೇ ಮೊದಲ ಬಾರಿಗೆ ಅವರು ಸಾಧನೆ ಮಾಡಿದ್ದಾರೆ.
ಐಸಿಸಿ ಶ್ರೇಯಾಂಕದಲ್ಲಿ ಬರೋಬ್ಬರಿ ಏಳು ಸ್ಥಾನ ಮೇಲಕ್ಕೇರಿರುವ ಅಫ್ರಿದಿ, ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್‍ವುಡ್ ಅವರನ್ನು ಎರಡನೇ ಸ್ಥಾನಕ್ಕೆ ತಳ್ಳಿದ್ದಾರೆ. ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಕೇವಲ 23 ರನ್ ಬಿಟ್ಟು ಕೊಟ್ಟು ಪ್ರಮುಖ ಮೂರು ವಿಕೆಟ್‍ಗಳನ್ನು ಕಬಳಿಸಿದ ಅಫ್ರಿದಿ ತಂಡದ ಗೆಲುವಿನ ಬಳಿಕ ಅಗ್ರಸ್ಥಾನವನ್ನು ಪಡೆದಿದ್ದಾರೆ. ಅತ್ತ ತಿಂಗಳುಗಳ ಹಿಂದೆ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನ ಪಡೆದಿದ್ದ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಈಗ ಮೂರನೇ ಸ್ಥಾನದಲ್ಲಿದ್ದಾರೆ.
Advertisement
Advertisement
ಟೀಂ ಇಂಡಿಯಾ ಸ್ಪಿನ್ನರ್ ಕುಲ್‍ದೀಪ್ ಯಾದವ್ ಏಳನೇ ಸ್ಥಾನ ಪಡೆಯುವ ಮೂಲಕ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡ ಎರಡನೇ ಆಟಗಾರರಾಗಿದ್ದಾರೆ. ಉಳಿದಂತೆ ದಕ್ಷಿಣ ಆಫ್ರಿಕಾ ಸ್ಪಿನ್ನರ್ ಕೇಶವ್ ಮಹಾರಾಜ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಮುಜೀಬ್ ಉರ್ ರೆಹಮಾನ್ ಎಂಟನೇ ಸ್ಥಾನದಲ್ಲಿದ್ದಾರೆ.
Advertisement
ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಬ್ಯಾಟ್ಸ್‍ಮನ್‍ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಶುಭಮನ್ ಗಿಲ್ ಎರಡನೇ ಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕ್ರಮವಾಗಿ ಐದು ಮತ್ತು ಏಳನೇ ಸ್ಥಾನದಲ್ಲಿದ್ದಾರೆ.
Advertisement
ಆಲ್‍ರೌಂಡರ್‌ಗಳ ಪೈಕಿ ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಅಗ್ರಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ ಗಾಯಾಳುವಾಗಿ ಭಾರತದ ಕಳೆದೆರಡು ವಿಶ್ವಕಪ್ ಪಂದ್ಯವನ್ನು ಕಳೆದುಕೊಂಡಿರುವ ಹಾರ್ದಿಕ್ ಪಾಂಡ್ಯ 11ನೇ ಸ್ಥಾನಕ್ಕೆ ಕುಸಿದಿದ್ದಾರೆ. ರವೀಂದ್ರ ಜಡೇಜಾ 13ನೇ ಸ್ಥಾನದಲ್ಲಿ ಮುಂದುವರಿದರೆ, ಪಾಕಿಸ್ತಾನದ ಶಾದಾಬ್ ಖಾನ್ 20ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಪಾಕಿಸ್ತಾನ ತಂಡವು ವಿಶ್ವಕಪ್ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ನೆದರ್ಲೆಂಡ್ಸ್ ಮತ್ತು ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಕಪ್ ಗೆಲ್ಲುವ ತವಕದಲ್ಲಿದ್ದ ಪಾಕ್ ಬಳಿಕ ಸತತ ನಾಲ್ಕು ಸೋಲುಗಳೊಂದಿಗೆ ಮುಗ್ಗರಿಸಿತು. ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಕಂಡ ಪಾಕಿಸ್ತಾನ ಕೊನೆಗೂ ಬಾಂಗ್ಲಾದೇಶ ವಿರುದ್ಧ ಗೆದ್ದು ಸೆಮಿಫೈನಲ್ ಪ್ರವೇಶಿಸುವ ಕನಸನ್ನು ಜೀವಂತವಾಗಿಟ್ಟುಕೊಂಡಿದೆ.
Web Stories