ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್

Public TV
1 Min Read
Shah Rukh Khan

ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shah Rukh Khan) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪಠಾಣ್, ಜವಾನ್, ಡಂಕಿ ಸಿನಿಮಾದ ನಂತರ ಹೊಸ ಸಿನಿಮಾ ಘೋಷಣೆ ಮಾಡದೇ ಉಳಿದಿದ್ದ ಅವರು, ಅಭಿಮಾನಿಗಳಿಗೆ ಹೊಸ ಚಿತ್ರದ ಅಪ್ ಡೇಟ್ ನೀಡಿದ್ದಾರೆ. ತಮ್ಮ ಹೊಸ ಸಿನಿಮಾ ಜುಲೈ ಅಥವಾ ಆಗಸ್ಟ್ ನಿಂದ ಶುರುವಾಗಲಿದೆ ಎಂದಿದ್ದಾರೆ. ಉಳಿದಂತೆ ಅವರು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

Shah Rukh Khan

ಈ ನಡುವೆ ಶಾರುಖ್ ಖಾನ್ (Kamal Haasan) ಕುರಿತಾಗಿ ಅಚ್ಚರಿಯ ಮಾತುಗಳನ್ನು ಆಡಿದ್ದಾರೆ ದಕ್ಷಿಣದ ಹೆಸರಾಂತ ನಟ ಕಮಲ್ ಹಾಸನ್.  ಪುತ್ರಿ ಶ್ರುತಿ ಹಾಸನ್ ಜೊತೆಗಿನ ಮಾತುಕತೆಯಲ್ಲಿ ಶಾರುಕ್ ಆಸೆಗಳನ್ನು ಅವರು ರಿವೀಲ್ ಮಾಡಿದ್ದಾರೆ.

Kamal Haasan

ತಂದೆಗೆ ಇನ್ನೂ ಏನಾದರೂ ಆಸೆಗಳು ಉಳಿದಿದ್ದವಾ? ಎಂದು ಶ್ರುತಿ ಕೇಳ್ತಾರೆ. ಆಗ ಯಾವುದೇ ಆಸೆಗಳು ಇಲ್ಲ ಎಂದು ಹೇಳುವ ಕಮಲ್ ಹಾಸನ್, ಈ ಸಮಯದಲ್ಲಿ ಶಾರುಖ್ (Shah Rukh Khan) ಆಸೆಯನ್ನು ಹೊರ ಹಾಕುತ್ತಾರೆ. ಮಣಿರತ್ನಂ (Mani Ratnam) ಜೊತೆ ಸಿನಿಮಾ ಮಾಡಬೇಕು ಎನ್ನುವುದು ಶಾರುಖ್ ಆಸೆ. ಅದಕ್ಕಾಗಿ ಅವರು ಪ್ರೈವೆಟ್ ಜೆಟ್ ತಗೆದುಕೊಳ್ಳೊ ಕನಸು ಕಂಡಿದ್ದಾರೆ. ಒಂದಾದರೂ ಅವರಿಗೆ ಕನಸಿದೆ ಎಂದಿದ್ದಾರೆ ಕಮಲ್.

 

ಶಾರುಖ್ ಅವರಿಗೆ ವಿಮಾನ ಖರೀದಿಸುವ ಮತ್ತು ಮಣಿರತ್ನಂ ಸಿನಿಮಾದಲ್ಲಿ ನಟಿಸುವ ಆಸೆಯನ್ನು ವ್ಯಕ್ತ ಪಡಿಸಿರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಹಜವಾಗಿಯೇ ಅಚ್ಚರಿ ತರಿಸಿದೆ. ವಿಮಾನ ಏನೋ ಖರೀದಿಸಬಹುದು. ಆದರೆ, ಮಣಿರತ್ನಂ ಅವರನ್ನು ಖರೀದಿಸೋಕೆ ಆಗಲ್ಲ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

Share This Article