ಮುಂಬೈ: ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ಇಂದು ತಮ್ಮ 53ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸದ್ಯ ಶಾರೂಕ್ ಅವರ ಮನ್ನತ್ ಮನೆ ಮುಂದೆ ಸಾವಿರಾರು ಅಭಿಮಾನಿಗಳು ಭೇಟಿ ನೀಡಿ ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭಾಶಯ ತಿಳಿಸಲು ಮುಂಬೈನ ಮನ್ನತ್ ಮನೆಗೆ ಭೇಟಿ ನೀಡಿದರು. ಇದೇ ವೇಳೆ ಶಾರೂಕ್ ಮನೆಯಿಂದ ಹೊರಗೆ ಬಂದು ತನ್ನ ಅಭಿಮಾನಿಗಳತ್ತ ಕೈ ಬೀಸಿದ್ದಾರೆ.
ಸದ್ಯ ಶಾರೂಕ್ ತಮ್ಮ ಹುಟ್ಟುಹಬ್ಬದ ದಿನವೂ ಕೆಲಸದಲ್ಲಿ ತೊಡಗಲಿದ್ದಾರೆ. ಶಾರೂಕ್ ತಮ್ಮ ಮುಂಬರುವ ‘ಝೀರೋ’ ಚಿತ್ರದ ಟ್ರೈಲರ್ ಲಾಂಚ್‍ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಟ್ರೈಲರ್ 3 ನಿಮಿಷ 13 ಸೆಕೆಂಡ್‍ಗಳಿದೆ. ಚಿತ್ರದ ಟ್ರೈಲರ್ ಅನ್ನು ಮುಂಬೈನಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಬಿಡುಗಡೆ ಮಾಡಲಿದ್ದಾರೆ.
ಝೀರೋ ಚಿತ್ರವನ್ನು ನಿರ್ದೇಶಕ ಆನಂದ್ ಎಲ್ ರೈ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಶಾರೂಕ್‍ಗೆ ನಾಯಕಿಯಾಗಿ ಕತ್ರಿನಾ ಕೈಫ್ ಹಾಗೂ ಅನುಷ್ಕಾ ಶರ್ಮಾ ನಟಿಸಿದ್ದು, ಈ ಮೂವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv