ಬೀದರ್: ಅಭಿವೃದ್ಧಿಯ ಮೂಲಮಂತ್ರವೆಂದು 1 ಕೋಟಿ ರೂ. ವೆಚ್ಚದ ಸಿಸಿ ರಸ್ತೆಗೆ ಚಾಲನೆ ನೀಡಿದ ಶಾಸಕ ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿದರು.
ಜಿಲ್ಲೆಯ ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗೋರನಳ್ಳಿ ಗ್ರಾಮದ ಶಿವಾಜಿನಗರ ಹಾಗೂ ತೋರಣ ಕಾಲೋನಿಯಲ್ಲಿ ಸುಮಾರು 1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ನನ್ನ ಅವಧಿಯಲ್ಲಿ ಅಭಿವೃದ್ಧಿಯೇ ಮುಖ್ಯ ಮಂತ್ರವಾಗಿದೆ. ರಸ್ತೆ, ವಿದ್ಯುತ್, ನೀರು, ಶಿಕ್ಷಣ, ಆರೋಗ್ಯ ಹಾಗೂ ಎಲ್ಲಾ ಗ್ರಾಮಗಳಲ್ಲಿ ಜನರ ಜೀವನಮಟ್ಟವನ್ನು ಉನ್ನತಗೊಳಿಸುವುದು ನನ್ನ ಪ್ರಮುಖ ಗುರಿಯಾಗಿದೆ. ಅಭಿವೃದ್ಧಿಯ ದಾರಿಗೆ ನಿಮ್ಮ ಸಹಕಾರ ಅಗತ್ಯ ಎಂದು ಹೇಳಿದರು.
ಕ್ಷೇತ್ರದ ಜನರ ಸುಲಭ ಜೀವನಕ್ಕಾಗಿ ಹಾಗೂ ಮೂಲಭೂತ ಸೌಕರ್ಯಗಳ ಸುಧಾರಣೆಗೆ ಸ್ಥಳೀಯ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ರಸ್ತೆಗಳು, ನೀರು, ವಿದ್ಯುತ್, ಶಾಲೆಗಳು, ಆರೋಗ್ಯ ಸೇವೆಗಳನ್ನು ನೀಡುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.
ಕ್ಷೇತ್ರದ ಎಲ್ಲ ಹಳ್ಳಿಗಳಲ್ಲಿ ಒಂದಿಲ್ಲೊಂದು ರೀತಿಯ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಸಾಮಾಜಿಕ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತಿದ್ದೇನೆ. ರಸ್ತೆ, ಕುಡಿಯುವ ನೀರು, ನೀರಾವರಿ, ಶಾಲೆ ಕಟ್ಟಡ, ಸಮುದಾಯ ಭವನ, ಕಲ್ಯಾಣ ಮಂಟಪ, ವಿದ್ಯುತ್ ದ್ವೀಪ ಹೀಗೆ ಅನೇಕ ಕಾಮಗಾರಿಗಳಿಗೆ ಆದ್ಯತೆ ನೀಡಿದ್ದೇನೆ. ಕ್ಷೇತ್ರದ ಜನತೆಗಾಗಿ ಹಲವಾರು ದೊಡ್ಡ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದೇನೆ ಎಂದು ತಿಳಿಸಿದರು.
ನನ್ನ ಕಾರ್ಯ ಸಾರ್ವಜನಿಕರ ಸುಖ, ಕ್ಷೇಮ ಮತ್ತು ಅಭಿವೃದ್ಧಿಗೆ ಸಮರ್ಪಿತವಾಗಿದೆ. ಸಾರ್ವಜನಿಕರು ಸಮಸ್ಯೆಗಳನ್ನು ನೇರವಾಗಿ ಕೇಳಿ, ಪರಿಹಾರ ನೀಡುವುದು ನನ್ನ ಪ್ರಮುಖ ಉದ್ದೇಶ. ನಿಮ್ಮ ಬೆಂಬಲ ಮತ್ತು ಸಹಕಾರದಿಂದ ನಮ್ಮ ಪ್ರದೇಶದ ಅಭಿವೃದ್ಧಿಗೆ ನಾನು ಸದಾ ಕೆಲಸ ಮಾಡುತ್ತೇನೆ ಎಂದು ಅಭಿಪ್ರಾಯಪಟ್ಟರು.

