ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ (Shakthi Scheme) ಜಾರಿಗೆ ಬಂದಾಗಿನಿಂದ ಒಂದಲ್ಲ ಒಂದು ಅವಾಂತರಗಳು ಬಯಲಾಗ್ತಾನೇ ಇವೆ. ಇದೀಗ ಕುಡುಕ ಪತಿಯೊಬ್ಬ ಟ್ರಿಪ್ಗೆ ಹೋದ ತನ್ನ ಪತ್ನಿ (Wife) ಬಂದಿಲ್ಲವೆಂದು ಅವಾಂತರ ಸೃಷ್ಟಿಸಿದ್ದಾನೆ.
ಹೊಸಕೋಟೆಯ ಬಸ್ ನಿಲ್ದಾಣದಲ್ಲಿ ಪತ್ನಿ ವಿರುದ್ಧ ಸಿಟ್ಟಿಗೆದ್ದ ಪತಿ ಬಸ್ ಟೈಯರ್ಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪರಿಣಾಮ ಹೊಸಕೋಟೆ (Hosakote) ಬಸ್ ನಿಲ್ದಾಣದಲ್ಲಿ ಅರ್ಧಗಂಟೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಕೆಲಕಾಲ ಪರದಾಟ ಅನುಭವಿಸಿದರು.
Advertisement
Advertisement
ನನ್ನ ಹೆಂಡತಿ ಟ್ರಿಪ್ ಗೆ ಹೋದವಳು ಇನ್ನೂ ವಾಪಸ್ ಬಂದಿಲ್ಲ. ಸಿದ್ದರಾಮಯ್ಯ (Siddaramaiah) ಸರಿಯಿಲ್ಲ, ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ (Free Bus Ticket For Women) ರದ್ದುಗೊಳಿಸಿ. ಸರ್ಕಾರ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣವನ್ನು ತೆಗೆದು ವ್ಯಕ್ತಿ ಹಾಕಬೇಕೆಂದು ಒತ್ತಾಯಿಸಿದ್ದಾನೆ. ಇದನ್ನೂ ಓದಿ: ಸ್ತ್ರೀ ಶಕ್ತಿ ಎಫೆಕ್ಟ್ – ಒಂದೇ ತಿಂಗಳಲ್ಲಿ ಹುಲಿಗೆಮ್ಮನ ಹುಂಡಿಯಲ್ಲಿ 1 ಕೋಟಿ ರೂ. ಕಾಣಿಕೆ ಸಂಗ್ರಹ
Advertisement
Advertisement
ಕಂಠಪೂರ್ತಿ ಕುಡಿದಿರುವ ವ್ಯಕ್ತಿ ತೂರಾಡಿಕೊಂಡು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ. ಅಲ್ಲದೆ ಬಸ್ ಟೈಯರ್ಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ನೆರೆದ ಜನ ಆತನನ್ನು ರಕ್ಷಣೆ ಮಾಡಿದ್ದಾರೆ. ನಂತರ ಹೊಸಕೋಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.
Web Stories