ಮಂಡ್ಯ: ಇಲ್ಲಿನ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಪ್ರಕರಣದಲ್ಲಿ ಅಚ್ಚರಿಯ ವಿಷಯ ಬಹಿರಂಗವಾಗಿದೆ. ತನಿಖೆ ವೇಳೆ ಪತ್ತೆಯಾದ ಡೆತ್‌ನೋಟ್(death note) ಹಲವು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ.
ಪ್ರಭಾಕರ್ ಅವರು ಮಂಗಳವಾರ ನಸುಕಿನ ಜಾವ 3:30ರ ವೇಳೆಗೆ ಪತ್ನಿ ಜ್ಯೋತಿ ಮತ್ತು ಪುತ್ರ ಸಂತೋಷ್ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನರೆ. ಬಳಿಕ ತನ್ನ ಬಟ್ಟೆ ಅಂಗಡಿಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತ್ನಿ ಜ್ಯೋತಿ ಅವರನ್ನು ಪಂಚೆಯಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಈ ವೇಳೆ ಅಲ್ಲಿಗೆ ಬಂದ ಪುತ್ರ ಸಂತೋಷ್‌ನನ್ನೂ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಸಂತೋಷ್ ಅವರಿಗೆ ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಘಟನೆ ನಡೆದ ವೇಳೆ ಸೊಸೆ ಗಾಢ ನಿದ್ರೆಯಲ್ಲಿದ್ದ ಕಾರಣ ಮನಯಲ್ಲೇ ಇದ್ದರೂ ಈ ಘಟನೆ ಆಕೆಯ ಗಮನಕ್ಕೆ ಬಂದಿಲ್ಲ. ಬೆಳಿಗ್ಗೆ ಎದ್ದು ತಿಂಡಿ ತಯಾರಿಸಿದ ಬಳಿಕ ಅತ್ತೆಯನ್ನು ಎಬ್ಬಿಸಲು ಕೊಠಡಿಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಒಂದೇ ಕುಟುಂಬದ ಮೂವರು ನೇಣಿಗೆ ಶರಣು; ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ತಂದೆ-ತಾಯಿ, ಮಗ
ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ತೆಯಾದ ಡೆತ್‌ನೋಟ್‌ನಲ್ಲಿ ಪ್ರಭಾಕರ್ ಅವರು ತಮ್ಮ ಆರ್ಥಿಕ ಸಂಕಷ್ಟವನ್ನು ಉಲ್ಲೇಖಿಸಿದ್ದಾರೆ. ಬಟ್ಟೆ ವ್ಯಾಪಾರ ಕುಸಿತಗೊಂಡಿದ್ದು, ಸಾಲದ ಒತ್ತಡ ಹೆಚ್ಚಾಗಿತ್ತು ಎಂದು ಬರೆದಿದ್ದಾರೆ. ಅದೇ ಕಾರಣಕ್ಕೆ ಮಗ ಮತ್ತು ಹೆಂಡತಿಯನ್ನು ಸಾಯಿಸಿರುವುದಾಗಿ ಬರೆದಿದ್ದಾರೆ.
ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ತಮ್ಮ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ. ವ್ಯಾಪಾರ ಕಡಿಮೆಯಾದ ಕಾರಣ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಖಾಸಗಿ ಫೈನಾನ್ಸ್ ಸಂಸ್ಥೆಗಳ ಸಾಲದ ಒತ್ತಡ ಮತ್ತು ಕಿರುಕುಳದಿಂದ ಮಾನಸಿಕವಾಗಿ ಕುಗ್ಗಿದ್ದೆ ಎಂದು ಸಹ ಪ್ರಭಾಕರ್ ಬರೆದಿದ್ದಾರೆ.
ಈ ಬಗ್ಗೆ ಮಾತನಾಡಿರುವ ಮಂಡ್ಯ ಜಿಲ್ಲಾ ಪೊಲೀಸ್ ಎಸ್‌ಪಿ ಶೋಭಾರಾಣಿ, ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿರುವ ಅಂಶಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಈಜಲು ಹಳ್ಳಕ್ಕೆ ಇಳಿದ ಸಹೋದರರಿಬ್ಬರು ನೀರುಪಾಲು – ಪೋಷಕರ ಆಕ್ರಂದನ
ಶಕ್ತಿ ಯೋಜನೆಯಿಂದ ಹೊಡೆತ ಹೇಗೆ?
ಊರಿನಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ ಇವರಿಗೆ ಗ್ರಾಮದಲ್ಲಿರುವ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಕ್ಕೆ ಬರುತ್ತಿದ್ದರು. ಆದರೆ ಶಕ್ತಿ ಯೋಜನೆಯ ಬಳಿಕ ಮಹಿಳೆಯರು ಮೈಸೂರು, ಬೆಂಗಳೂರಿಗೆ ತೆರಳುತ್ತಿರುವ ಕಾರಣ ವ್ಯಾಪಾರ ಕುಸಿದಿದೆ. ಈ ಕಾರಣಕ್ಕೆ ಡೆತ್ ನೋಟ್‌ನಲ್ಲಿ ಶಕ್ತಿ ಯೋಜನೆಯನ್ನು ಉಲ್ಲೇಖಿಸಿರಬಹುದು ಎಂದು ಶಂಕಿಸಲಾಗಿದೆ.ಇದನ್ನೂ ಓದಿ:
