ಬೆಂಗಳೂರು: ಜು.27 ರಂದು ಆಟೋ (Auto), ಕ್ಯಾಬ್ ಹಾಗೂ ಖಾಸಗಿ ಬಸ್‍ಗಳ (Private Bus) ಮಾಲೀಕರು ಹಾಗೂ ಚಾಲಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದರಿಂದಾಗಿ ಜು.26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿಯ ವರೆಗೂ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‍ಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ.
ರಾಜ್ಯ ಸರ್ಕಾರದ ಕೆಲವು ನೀತಿಗಳಿಂದ ಖಾಸಗಿ ಸಾರಿಗೆಗೆ ನಷ್ಟವಾಗುತ್ತಿದೆ. ಈ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ಖಾಸಗಿ ಸಾರಿಗೆ ವಾಹನಗಳ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಶಕ್ತಿ ಯೋಜನೆ (Shakti Scheme), ವೈಟ್ ಬೋರ್ಡ್ ವಾಹನವನ್ನ ವಾಣಿಜ್ಯ ವಾಹನವಾಗಿ ಉಪಯೋಗಿಸುತ್ತಿರುವುದು, ದ್ವಿಚಕ್ರ ವಾಹನಗಳಿಗೆ ಮುಕ್ತ ಪರವಾನಿಗೆ ನೀಡುತ್ತಿರುವುದು ಸೇರಿದಂತೆ ಹಲವು ಯೋಜನೆಗಳಿಂದ ಖಾಸಗಿ ಸಾರಿಗೆ ನೆಲ ಕಚ್ಚಿ ಹೋಗಿದೆ ಎಂದು ಖಾಸಗಿ ಸಾರಿಗೆ ಮಾಲೀಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಆಟೋ ಚಾಲಕರ ನಿರ್ಲಕ್ಷ್ಯ ಆರೋಪ- ಬೇಡಿಕೆಗಳ ಈಡೇರಿಕೆಗೆ ಬಂದ್ ಎಚ್ಚರಿಕೆ ಕೊಟ್ಟ ಒಕ್ಕೂಟ
Advertisement
Advertisement
ಸರ್ಕಾರದ ಈ ನೀತಿಗಳಿಂದ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್ ಚಾಲಕರು ಸಾಲ, ವಿಮೆ ಕಟ್ಟಲು ಮತ್ತು ಜೀವನ ಸಾಗಿಸಲು ಕಷ್ಟಪಡುವಂತಾಗಿದೆ. ಇದರಿಂದ ರಾಜ್ಯದ 23 ಸಾರಿಗೆ ಸಂಘಟನೆಗಳು ಸೇರಿ ಪ್ರತಿಭಟನೆಗೆ ಮುಂದಾಗುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ – ಸುಪ್ರೀಂಕೋರ್ಟ್ ಅಸಮಾಧಾನ, ಸ್ವಯಂ ದೂರು ದಾಖಲು
Advertisement
Web Stories