ಕಲಬುರಗಿ: ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಿಂದಾಗಿ (Shakti Scheme) ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ (Bus) ಉಚಿತ ಪ್ರಯಾಣದ ಅವಕಾಶ ಸಿಗುತ್ತಿದೆ. ಆದರೆ ಈ ವರದಾನದಿಂದ ಹಲವೆಡೆ ಅವಾಂತರಗಳೂ ನಡೆದಿರುವುದು ವರದಿಯಾಗಿವೆ. ಫುಲ್ ರಶ್ ಆಗಿದ್ದ ಬಸ್‌ನಲ್ಲಿ ನೂಕಾಟ ತಳ್ಳಾಟದಿಂದ ವಿದ್ಯಾರ್ಥಿನಿಯೊಬ್ಬಳು (Student) ಅಸ್ವಸ್ಥಳಾದ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದ ಬಳಿ ಘಟನೆ ನಡೆದಿದೆ. ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದರಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಶರಣಮ್ಮ ಬಸ್‌ನಲ್ಲಿ ಸಿಲುಕಿ ಅಸ್ವಸ್ಥಳಾಗಿದ್ದಾಳೆ. ಇದನ್ನೂ ಓದಿ: ಬಸ್ ನಿಲ್ಲಿಸದ್ದಕ್ಕೆ ಕಲ್ಲು ಎಸೆದು ಶಕ್ತಿ ಪ್ರದರ್ಶಿಸಿದ ಮಹಿಳೆ – 5 ಸಾವಿರ ದಂಡ ಕಟ್ಟಿ ಅದೇ ಬಸ್‍ನಲ್ಲಿ ಪ್ರಯಾಣ
Advertisement
Advertisement
ವಸ್ತಾರಿ ಗ್ರಾಮದ ಶರಣಮ್ಮ ಜೇವರ್ಗಿಯಲ್ಲಿರುವ ಕಾಲೇಜಿಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ. ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಈ ಹಿನ್ನೆಲೆ ಕುಮ್ಮನಸಿರಸಗಿ ಗ್ರಾಮದ ಬಳಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಕ್ಕೆ ಹೆಚ್ಚಿನ ಬಸ್‌ಗಳನ್ನು ಬಿಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮದ್ಯ ಪ್ರಿಯರಿಗೆ ಶಾಕ್ – ಬಿಯರ್ ದರ ಏರಿಕೆ