ಕಂಡಕ್ಟರ್‌ಗಳಿಗೆ ಪಜೀತಿ ತಂದ ಶಕ್ತಿ ಯೋಜನೆ – ಮಹಿಳಾ ಪ್ರಯಾಣಿಕರಿಂದ ಕೆಲಸ ಕಳೆದುಕೊಳ್ಳೋ ಭೀತಿ

Public TV
1 Min Read
Shakti Scheme

ಬೆಂಗಳೂರು: ಶಕ್ತಿ ಯೋಜನೆ (Shakti Scheme) ರಾಜ್ಯದ ಹೆಣ್ಣುಮಕ್ಕಳಿಗೆ ವರದಾನವಾಗಿದೆ. ಆದರೆ ಕಂಡಕ್ಟರ್‌ಗಳಿಗೆ (Conductor) ಮಾತ್ರ ಕೆಲಸ ಕಳೆದುಕೊಳ್ಳುವ ಭೀತಿ ಶುರುವಾಗಿದೆ. ದಯಮಾಡಿ ನಮ್ಮನ್ನು ಕಾಪಾಡಿ ಅಂತ ಸಾರಿಗೆ ಸಚಿವರಿಗೆ ಕಂಡಕ್ಟರ್‌ಗಳು ಕೈ ಮುಗಿದು ಕೇಳಿಕೊಳ್ಳುತ್ತಿದ್ದಾರೆ.

Ramalinga Reddy

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಯೋಜನೆ ತುಂಬಾ ಅನುಕೂಲವಾಗಿದೆ. ಆದರೆ ಅದೇ ಯೋಜನೆ ನಿರ್ವಾಹಕರ ಕೆಲಸಕ್ಕೆ ಕುತ್ತು ತರುತ್ತಿದೆ. ಮಹಿಳಾ ಪ್ರಯಾಣಿಕರು ಮಾಡುವ ಎಡವಟ್ಟಿನಿಂದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗಳು ಕೆಲಸ ಕೆಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮಹಿಳಾ ಪ್ರಯಾಣಿಕರು ಯಾವ ಸ್ಥಳಕ್ಕೆ ಹೋಗಬೇಕೋ, ಅಲ್ಲಿಗೆ ಶೂನ್ಯ ದರದ ಟಿಕೆಟ್ ಪಡೆದು, ಬೇರೊಂದು ನಿಲ್ದಾಣಗಳಲ್ಲಿ ಇಳಿದು ಹೋಗುತ್ತಿದ್ದಾರೆ. ಈ ವೇಳೆ ಟಿಕೆಟ್ ಚೆಕ್ಕಿಂಗ್ ಇನ್ಸ್‌ಪೆಕ್ಟರ್ ಬಂದು ಪರಿಶೀಲಿಸಿದಾಗ, ಪ್ಯಾಸೆಂಜರ್ ಇರುವುದಿಲ್ಲ. ಆದರೆ ಟಿಕೆಟ್ ರಿಸಿವ್ ಆಗಿರುತ್ತದೆ. ಇದಕ್ಕೆ ಕಂಡಕ್ಟರ್‌ಗಳನ್ನು ಹೊಣೆಯಾಗಿಸಿ, ತನಿಖಾಧಿಕಾರಿಗಳು ದಂಡ ಹಾಕೋದು, ಅಮಾನತು ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಇದರಿಂದ ತಪ್ಪು ಮಾಡದಿದ್ದರೂ ಕಂಡಕ್ಟರ್‌ಗಳು ಶಿಕ್ಷೆ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ಬಾಂಗ್ಲಾ ಆಯ್ತು ಈಗ ಪಾಕ್‌ನಲ್ಲಿ ಪ್ರತಿಭಟನೆ – ಇಮ್ರಾನ್‌ ಬಿಡುಗಡೆಗೆ ಆಗ್ರಹಿಸಿ ಬೀದಿಗಿಳಿದ ಸಾವಿರಾರು ಬೆಂಬಲಿಗರು

ಪ್ರಯಾಣದ ವೇಳೆ ಬಸ್‌ಗಳು ಯಾವುದಾದರೂ ಡಾಬಾ, ಹೊಟೇಲ್‌ಗಳಲ್ಲಿ ನಿಲ್ಲಿಸಿದಾಗ, ಒಂದು ಬಸ್‌ನಲ್ಲಿ ಟಿಕೆಟ್ ಪಡೆದು, ಇನ್ನೊಂದು ಬಸ್‌ನಲ್ಲಿ ಮಹಿಳೆಯರು ಪ್ರಯಾಣ ಮಾಡುತ್ತಾರೆ. ಟಿಕೆಟ್ ಪಡೆದ ಬಸ್‌ನಲ್ಲಿ ಆ ಪ್ರಯಾಣಿಕರು ಇಲ್ಲದಿದ್ದಾಗ ಅನಿವಾರ್ಯವಾಗಿ ಅವರಿಗಾಗಿ ಕಾಯುತ್ತಾರೆ. ಇದರಿಂದ ಇತರೆ ಪ್ರಯಾಣಿಕರಿಗೂ ತೊಂದರೆಯಾಗುತ್ತಿದೆ. ಬಸ್ ನಿರ್ವಾಹಕರಿಗೆ ಆಗುತ್ತಿರುವ ಈ ಸಮಸ್ಯೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಗಮನಕ್ಕೂ ಬಂದಿದೆ. ಈ ಬಗ್ಗೆ ನಿಗಮದ ಎಂಡಿ ಜೊತೆ ಮಾತನಾಡಿದ್ದು, ಇದಕ್ಕೊಂದು ಪರಿಹಾರ ಹುಡುಕುವ ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್​​ಗೆ 16 ಸದಸ್ಯರ ಭಾರತ ತಂಡ ರೆಡಿ – ಯುವ ಆಟಗಾರರಿಗೆ ಮಣೆ!

Share This Article