ನವದೆಹಲಿ: ಡಿಜಿಟಲ್ ರೂಪಾಯಿ ಹಾಗೂ ಸಾಮಾನ್ಯ ರೂಪಾಯಿಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಭಾರತೀಯ ರಸರ್ವ್ ಬ್ಯಾಂಕ್(ಆರ್‍ಬಿಐ) ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
ಆರ್‍ಬಿಐ ಡಿಜಿಟಲ್ ರೂಪಾಯಿಯನ್ನು 2022-23ರಲ್ಲಿ ಬಿಡುಗಡೆ ಮಾಡಲಿದೆ. ಇದರ ನಿರ್ಧಿಷ್ಟ ಟೈಮ್‍ಲೈನ್ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ಶಕ್ತಿಕಾಂತ ದಾಸ್ ಗುರುವಾರ ತಿಳಿಸಿದ್ದಾರೆ. ಇದನ್ನೂ ಓದಿ: ಕಾಲೇಜುಗಳಿಗೆ ಯಾರೂ ಧಾರ್ಮಿಕ ಬಟ್ಟೆಗಳನ್ನು ಧರಿಸಿ ಹೋಗುವಂತಿಲ್ಲ: ಹೈಕೋರ್ಟ್ ಮಧ್ಯಂತರ ಆದೇಶ
Advertisement
Advertisement
2022-23ರ ಬಜೆಟ್ ಅನ್ನು ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದರು. ಈ ವೇಳೆ ಆರ್‍ಬಿಐ ಬ್ಲಾಕ್‍ಚೈನ್ ತಂತ್ರಜ್ಞಾನ ಬಳಸಿಕೊಂಡು ಡಿಜಿಟಲ್ ರೂಪಾಯಿಯನ್ನು ಶೀಘ್ರವೇ ತರಲಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಮೋದಿಗೆ ನಾನು ಹೆದರೋಲ್ಲ, ಅವರ ಸೊಕ್ಕು ನೋಡಿ ನಗು ಬರುತ್ತೆ: ರಾಹುಲ್ ಗಾಂಧಿ
Advertisement
ಬಜೆಟ್ ಮಂಡನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ರೂಪಾಯಿಯನ್ನು ನಗದು ರೂಪದಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದರು.