ದೂರದರ್ಶನದಲ್ಲಿ ಪ್ರಸಾರವಾದ ಜನಪ್ರಿಯ ಧಾರಾವಾಹಿ ‘ಮಹಾಭಾರತದ’ (Mahabharata) ಶಕುನಿ ಪಾತ್ರಧಾರಿ ಗೂಫಿ ಪೈಂಟಲ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಇದೆ. ಮೂರು ದಿನಗಳ ಹಿಂದೆಯೇ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖ್ಯಾತ ಕಿರುತೆರೆ ನಟಿ ಟೀನಾ ಘಾಯ್ ಖಚಿತ ಪಡಿಸಿದ್ದಾರೆ.
Advertisement
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ 78ರ ವಯಸ್ಸಿನ ಗೂಫಿಗೆ (Goofy Paintal) ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಕುಟುಂಬ ಮಾಹಿತಿ ನೀಡಲು ನಿರಾಕರಿಸಿದೆ ಎಂದು ಮಾಧ್ಯಮಗಳ ವರದಿ ಮಾಡಿವೆ. ಆದರೆ, ನಟಿ ಟೀನಾ ಘಾಯ್, ನಟನ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ನೀನು ಮುಸ್ಲಿಂ ಸಮುದಾಯಕ್ಕೆ ಕಳಂಕ ಎಂದವರಿಗೆ ನಟಿ ಸಾರಾ ಹೇಳಿದ್ದೇನು?
Advertisement
Advertisement
ಗೂಫಿ ಕೇವಲ ಕಿರುತೆರೆಯಲ್ಲಿ ಮಾತ್ರವಲ್ಲ, ಬಾಲಿವುಡ್ ನಲ್ಲೂ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಮಹಾಭಾರತದ ಹೊರತಾಗಿಯೂ ಹಲವಾರು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಮಹಾಭಾರತದ ಶಕುನಿ (Shakuni) ಪಾತ್ರ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತು. ಮೂಲತಃ ಇವರು ಪಂಜಾಬ್ ನವರು. ವೃತ್ತಿ ಬದುಕಿಗಾಗಿ ಮುಂಬೈಗೆ ಅರಸಿ ಬಂದರು. ಮುಂಬೈನಲ್ಲೇ ಉಳಿದುಕೊಂಡು ಅನೇಕ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದರು.