ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ (Kannada Nameplate) ಇರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಆದೇಶ ಹೊರಡಿಸಿದ್ದಾರೆ.
Advertisement
ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ. ಆದ್ದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಟೀಚರ್ ಹೊಡೆದ್ರು ಅಂತಾ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ – ಶಾಲಾ ಬಿಲ್ಡಿಂಗ್‌ನ 3ನೇ ಫ್ಲೋರ್‌ನಿಂದ ಏಕಾಏಕಿ ಜಿಗಿದ ವಿದ್ಯಾರ್ಥಿನಿ!
Advertisement
Advertisement
ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇ.60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇ.40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ಗೆ ಮೋದಿ ಭೇಟಿ – ಝೆಲೆನ್ಸ್ಕಿ ಜೊತೆ ಮಾತುಕತೆ; ಯುದ್ಧದಲ್ಲಿ ಮಡಿದ ಮಕ್ಕಳ ಸ್ಮಾರಕ ವೀಕ್ಷಿಸಿದ ಪ್ರಧಾನಿ!