– ಕ್ಯಾಪ್ಟನ್ ರೋಹಿತ್‌ಗೆ ಹ್ಯಾಟ್ಸ್‌ಆಫ್ ಎಂದ ಶಮಾ ಮೊಹಮ್ಮದ್
ಮುಂಬೈ: ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ (Rohit Sharma) ದಪ್ಪಗಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ (Shama Mohamed) ಟೀಕೆಗೆ ಗುರಿಯಾಗಿದ್ದರು. ಇಂದು ಅದೇ ರೋಹಿತ್ ಪಡೆಯನ್ನು ಕಾಂಗ್ರೆಸ್ ನಾಯಕಿ ಹಾಡಿಹೊಗಳಿದ್ದಾರೆ.
Advertisement
ದುಬೈನಲ್ಲಿ 2025 ರ ಚಾಂಪಿಯನ್ಸ್ ಟ್ರೋಫಿ (Champions Trophy 2025) ಗೆದ್ದ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ತಂಡವನ್ನು ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಅಭಿನಂದಿಸಿದ್ದಾರೆ. ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಮೊಹಮ್ಮದ್ ಶಮಿ ತಾಯಿಯ ಕಾಲು ಮುಟ್ಟಿ ಆಶೀರ್ವಾದ ಪಡೆದ ಕೊಹ್ಲಿ
Advertisement
Congratulations to #TeamIndia for their stupendous performance in winning the #ChampionsTrophy2025! 🇮🇳🏆
Hats off to Captain @ImRo45 who led from the front with a brilliant 76, setting the tone for victory. @ShreyasIyer15 and @klrahul played crucial knocks, steering India to…
— Dr. Shama Mohamed (@drshamamohd) March 9, 2025
Advertisement
ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಶಮಾ ಅವರು, ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ತಂಡಕ್ಕೆ ಅಭಿನಂದನೆಗಳು. 76 ರನ್ ಬಾರಿಸಿ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ ಕ್ಯಾಪ್ಟನ್ ರೋಹಿತ್ ಶರ್ಮಾ ಅವರಿಗೆ ಹ್ಯಾಟ್ಸಾಫ್. ಶ್ರೇಯಸ್ ಐಯ್ಯರ್, ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿ, ಟೀಂ ಇಂಡಿಯಾವನ್ನು ಜಯದತ್ತ ಕೊಂಡೊಯ್ದರು ಎಂದು ಶ್ಲಾಘಿಸಿದ್ದಾರೆ.
Advertisement
2025 ರ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಹಂತದಲ್ಲಿ ರೋಹಿತ್ ಶರ್ಮಾ ಅವರ ಫಿಟ್ನೆಸ್ ಬಗ್ಗೆ ಶಮಾ ಮೊಹಮ್ಮದ್ ಕಾಮೆಂಟ್ ಮಾಡಿ ವ್ಯಾಪಕವಾಗಿ ಟೀಕೆಗೆ ಗುರಿಯಾಗಿದ್ದರು. ‘ರೋಹಿತ್ ಶರ್ಮಾ ದಪ್ಪಗಿದ್ದಾರೆ. ಅವರು ಪ್ರಭಾವಶಾಲಿ ಕ್ಯಾಪ್ಟನ್ ಅಲ್ಲ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ರೋಹಿತ್ ಪಂದ್ಯಶ್ರೇಷ್ಠ – ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಕ್ಯಾಪ್ಟನ್
ಶಮಾ ಅವರ ಹೇಳಿಕೆಗೆ ಕ್ರಿಕೆಟ್ ಅಭಿಮಾನಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ ನಾಯಕಿಯನ್ನು ತರಾಟೆಗೆ ತೆಗೆದುಕೊಂಡರು. ಸ್ವತಃ ಕಾಂಗ್ರೆಸ್ ಪಕ್ಷವೇ ನಾಯಕಿಗೆ ಕಿವಿ ಹಿಂಡುವ ಕೆಲಸ ಮಾಡಿತ್ತು.
ಭಾನುವಾರ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ (New Zealand) ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು. ಇದನ್ನೂ ಓದಿ: ಟೀಂ ಇಂಡಿಯಾ ಚಾಂಪಿಯನ್ – ಭಾರತದ ಪರ ವಿಶಿಷ್ಠ ದಾಖಲೆ ಬರೆದ ಕೊಹ್ಲಿ
ಕ್ಯಾಪ್ಟನ್ ಆಗಿ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್ ಶರ್ಮಾ ಜವಾಬ್ದಾರಿಯುತ ಆಟವಾಡಿದರು. 76 ರನ್‌ಗಳನ್ನು ಹೊಡೆದು ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು.