ಬೆಂಗಳೂರು/ ದಾವಣಗೆರೆ: ಕಾಂಗ್ರೆಸ್‌ನಲ್ಲಿ ಡಿಸಿಎಂ (DCM) ಕೂಗು ಎದ್ದಿತ್ತು. ಆದರೆ ಈಗ ಲಿಂಗಾಯತ ಸಿಎಂ (Lingayat CM) ಕೂಗು ಎದ್ದಿದೆ. ಡಿಸಿಎಂ ತಗೊಂಡು ಏನ್ ಮಾಡಬೇಕು ಆದರೆ ಲಿಂಗಾಯತರು ಸಿಎಂ ಆಗಬೇಕು ಎಂದು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ನೇರವಾಗಿಯೇ ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ. ಲಿಂಗಾಯತ ಅಧಿಕಾರಿಗಳಿಗೆ ಪ್ರಮುಖ ಹುದ್ದೆಗಳೇ ಸಿಗುತ್ತಿಲ್ಲ ಎಂದು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಮೈತ್ರಿಯಿಂದ ಭಿನ್ನಮತ ಸ್ಫೋಟ – ಮುಖಂಡರ ಮನವೊಲಿಸಲು ನಿಖಿಲ್ ಕಸರತ್ತು
Advertisement
Advertisement
ನಿಜಲಿಂಗಪ್ಪ, ಜೆ.ಎಚ್.ಪಾಟೇಲರು ಇದ್ದಾಗ ಎಲ್ಲರೂ ಚೆನ್ನಾಗಿದ್ದರು. ಈಗ ನಮ್ಮವರು ಕಂಗಾಲಾಗಿದ್ದಾರೆ. ಸರ್ಕಾರದ ಆಯಾಕಟ್ಟಿನ ಪ್ರಮುಖ ಹುದ್ದೆಗಳು ನಮ್ಮ ಸಮಾಜದವರಿಗೆ ಕೊಟ್ಟಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ಸಮುದಾಯವರಿಗೆ ಮಣೆ ಹಾಕುತ್ತಿದ್ದಾರೆ ಎಂದು ಪರೋಕ್ಷವಾಗಿ ಕಿಡಿಕಾರಿದ್ದಾರೆ.
Advertisement
ಬೆಂಗಳೂರಿನಲ್ಲಿ ವೀರಶೈವ ಮಹಾಸಭಾದ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಭಾಷಣ ಮಾಡುವಾಗ ಸತ್ಯವನ್ನು ಹೇಳಿದ್ದೇನೆ. ಮುಖ್ಯವಾದ ಹುದ್ದೆಗಳನ್ನು ಬಹಳಷ್ಟು ಜನರಿಗೆ ಕೊಟ್ಟಿಲ್ಲ. ಇದರ ಬಗ್ಗೆ ನಾನು ಯಾವುದೇ ಮಂತ್ರಿಗಳ ಬಳಿ ಹೇಳಲು ಹೋಗಿಲ್ಲ. ಡಿಸಿಎಂ ತೆಗೆದುಕೊಂಡು ಏನು ಮಾಡಬೇಕು. ಆದರೆ ಸಿಎಂ ಆಗಬೇಕು. ಯಾವಾಗಲೂ ಸಿಎಂ ಹುದ್ದೆಗೆ ನಮ್ಮ ಪ್ರಸ್ತಾಪ ಇದ್ದೇ ಇರುತ್ತದೆ ಎಂದು ಹೇಳಿದರು.
Advertisement
ಲಿಂಗಾಯತ ಸಮುದಾಯಕ್ಕೂ ಡಿಸಿಎಂ ಹುದ್ದೆ ನೀಡಬೇಕು ಎಂಬ ಮಾತು ಕಾಂಗ್ರೆಸ್ (Congress) ನಾಯಕರಿಂದಲೇ ಈ ಹಿಂದೆ ಕೇಳಿ ಬಂದಿತ್ತು. ಈಗ ಡಿಸಿಎಂ ಆಗಿ ಏನು ಮಾಡಬೇಕು. ಆದರೆ ಸಿಎಂ ಆಗಬೇಕು ಎನ್ನುವ ಮೂಲಕ ಶಾಮನೂರು ಶಿವಶಂಕರಪ್ಪ ಲಿಂಗಾಯತ ಸಿಎಂ ಪರ ಧ್ವನಿ ಎತ್ತಿದ್ದಾರೆ. ಲಿಂಗಾಯತ ಸಿಎಂ ಕೂಗು ಮತ್ತಷ್ಟು ಜೋರಾದರೆ ಕಾಂಗ್ರೆಸ್ ಮತ್ತಷ್ಟು ಒತ್ತಡಕ್ಕೆ ಸಿಲುಕುವ ಸಾಧ್ಯತೆ ಇದೆ.
Web Stories