ಹಿಂದೂ ದೇವರನ್ನು ಸತತವಾಗಿ ಅವಮಾನಿಸುತ್ತಿರುವ ಲೀನಾ ಮಣಿಮೇಕಲೈ ವಿರುದ್ಧ ದೇಶಾದ್ಯಂತ ದೂರುಗಳು ದಾಖಲಾಗುತ್ತಿವೆ. ಕಾಳಿ ಕೈಯಲ್ಲಿ ಸಿಗರೇಟು ಮತ್ತು ಎಲ್‍ಜಿಬಿಡಿಕ್ಯೂ ಧ್ವಜ ಕೊಟ್ಟು ಹಿಂದೂಗಳ ಕಂಗೆಣ್ಣಿಗೆ ಗುರಿಯಾಗಿದ್ದ ಲೀನಾ, ಮೊನ್ನೆಯಷ್ಟೇ ಶಿವ ಪಾರ್ವತಿ ಕೈಯಲ್ಲೂ ಸಿಗರೇಟು ಕೊಟ್ಟು ಅಪಮಾನ ಮಾಡಿದ್ದಾರೆ. ಹೀಗಾಗಿ ಲೀನಾ ವಿರುದ್ಧ ದೂರುಗಳ ಮಹಾಪುರವೇ ಹರಿದು ಬರುತ್ತಿವೆ. ಅವರನ್ನು ಕೂಡಲೇ ಬಂಧಿಸಬೇಕು ಎಂಬ ಆಗ್ರಹ ಶುರುವಾಗಿದೆ.
ಮಧ್ಯ ಪ್ರದೇಶದಲ್ಲಿ ಅತೀ ಹೆಚ್ಚು ದೂರುಗಳು ಲೀನಾ ಮೇಲೆ ದಾಖಲಾಗಿರುವುದರಿಂದ, ಮಧ್ಯಪ್ರದೇಶ ಪೊಲೀಸರು ಲೀನಾ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಿದ್ದಾರೆ. ಐಪಿಸಿ ಸೆಕ್ಸನ್ 295 ಎ (ಧಾರ್ಮಿಕ ನಂಬಿಕೆಗಳಿಗೆ ಉದ್ದೇಶಪೂರ್ವಕವಾಗಿ ಭಾವನೆಗಳನ್ನು ಕೆರಳಿಸುವ ಕೃತ್ಯ) ಅಡಿಯಲ್ಲಿ ಭೋಪಾಲ್ ನಲ್ಲಿ ಎಫ್.ಐ.ಆರ್ ದಾಖಲಾಗಿದೆ. ಇದನ್ನೂ ಓದಿ:ತಮಿಳು ಕಿರುತೆರೆಯತ್ತ `ಪಾರು’ ಖ್ಯಾತಿಯ ಮೋಕ್ಷಿತಾ ಪೈ
ಎಫ್.ಐ.ಆರ್ ದಾಖಲಾಗುತ್ತಿದ್ದಂತೆಯೇ ಮಧ್ಯ ಪ್ರದೇಶದ ಗೃಹ ಸಚಿವಾಲಯದ ಆದೇಶದ ಮೇರೆಗೆ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಲೀನಾ ಮಣಿಮೇಕಲೈ ಕಾಳಿ ಬಗ್ಗೆ ಸಾಕ್ಷ್ಯ ಚಿತ್ರವನ್ನು ತಯಾರಿಸಿ ಅದನ್ನು ಈಗ ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಕಳುಹಿಸಿದ್ದಾರೆ. ಹಾಗಾಗಿ ಜುಲೈ 4 ರಂದು ಕಾಳಿಯ ಕೈಯಲ್ಲಿ ಸಿಗರೇಟು ಇರುವಂತಹ ಪೋಸ್ಟರ್ ಅನ್ನು ಹಂಚಿಕೊಂಡಿದ್ದರು. ಈ ಪೋಸ್ಟರ್ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.