ಮಡಿಕೇರಿ: ಪೊಲೀಸ್ ಠಾಣೆ ಮುಂಭಾಗ ಪ್ರತಿಭಟಿಸುತ್ತಿದ್ದ ಮುಸ್ಲಿಂ ಮಹಿಳೆಯರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಶನಿವಾರ ಸಂತೆ ಬಂದ್‍ಗೆ ಮುಂದಾಗಿದ್ದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಬಂದ್‍ಗೆ ಕರೆ ನೀಡಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಶನಿವಾರಸಂತೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದರು. ಆದರೂ ಅದನ್ನು ಉಲ್ಲಂಘಿಸಿ ಹಿಂದೂಪರ ಸಂಘಟನೆಗಳ ಹತ್ತಾರು ಮುಖಂಡರು ಮತ್ತು ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಮುಂದಾಗಿದ್ದರು. ಬೆಳಗ್ಗೆಯಿಂದಲೇ ಪೊಲೀಸರು ಪಟ್ಟಣದಲ್ಲಿ 144 ಜಾರಿಯಲ್ಲಿದ್ದು ಯಾವುದೇ ಬಂದ್ ಅಥವಾ ಪ್ರತಿಭಟನೆಗೆ ಅವಕಾಶ ಇಲ್ಲವೆಂದು ಪ್ರಚಾರ ಮಾಡುತ್ತಾ, ಜನರು ಎಂದಿನಂತೆ ಯಾವುದೇ ಆತಂಕವಿಲ್ಲದೆ ವ್ಯಾಪಾರ ವಹಿವಾಟು ನಡೆಸಬಹುದು ಎಂದು ಪ್ರಚಾರ ಮಾಡುತ್ತಿದ್ದರು. ಇದನ್ನೂ ಓದಿ: ಪರೀಕ್ಷೆಯಲ್ಲಿ 100ಕ್ಕೆ 89 ಅಂಕ ಪಡೆದ 104ರ ವೃದ್ಧೆಯ ಸ್ಫೂರ್ತಿದಾಯಕ ಕಥೆ
Advertisement
Advertisement
ಈ ನಡುವೆಯೂ 144 ಸೆಕ್ಷನ್ ಅನ್ನು ಉಲ್ಲಂಘಿಸಿ ಪ್ರತಿಭಟನೆ ಬಂದ್‍ಗೆ ಮುಂದಾದಾಗ ಸೋಮವಾರಪೇಟೆ ಡಿವೈಎಸ್‍ಪಿ ಶೈಲೇಂದ್ರ ಕುಮಾರ್ ಮತ್ತು ಶನಿವಾರ ಸಂತೆ ಸಿಪಿಐ ಪರಶಿವಮೂರ್ತಿ ಅವರ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ. ಅಲ್ಲದೆ ಪ್ರತಿಭಟನಾಕಾರರು ಪೊಲೀಸರು ಮುಸ್ಲಿಂ ರಾಷ್ಟ್ರ ಮಾಡಲು ಹೊರಟಿದ್ದಾರೆ ಎಂದು ಅವರ ವಿರುದ್ಧವೇ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಂದ್ ಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ ಕೆಲವು ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿದ್ದರೆ, ಮತ್ತೆ ಕೆಲವರು ಎಂದಿನಂತೆ ಅಂಗಡಿ ಮುಂಗಟ್ಟುಗಳನ್ನು ತೆರೆದಿದ್ದರು. ಸದ್ಯ ಶನಿವಾರಸಂತೆಯಲ್ಲಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದನ್ನೂ ಓದಿ: ಮೈಸೂರು, ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ: ವಾಟಾಳ್