ಬೆಂಗಳೂರು: ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇಂದು ಸ್ಥಳ ಮಹಜರನ್ನು ಸಹ ಮಾಡಿದ್ದಾರೆ. ಈ ವೇಳೆ 15 ಲಕ್ಷ ರೂ.ನಗದು ಹಾಗೂ ಬರೋಬ್ಬರಿ ಎರಡು ಕೆ.ಜಿ.ಯಷ್ಟು ಚಿನ್ನಾಭರಣ ಪತ್ತೆಯಾಗಿವೆ.
ತಿಗಳರಪಾಳ್ಯದ ಮನೆಯಲ್ಲಿ ಪೊಲೀಸರು ಇಂದು ಸ್ಥಳ ಮಹಜರು ನಡೆಸಿದ್ದು, ಮೂವರ ಡೆತ್ ನೋಟ್ ಪತ್ತೆಯಾಗಿವೆ. ಈ ವೇಳೆ ಹುಡುಕಾಟ ನಡೆಸಿದಾಗ 15 ಲಕ್ಷ ರೂ.ನಗದು, ಎರಡು ಕೆ.ಜಿ.ಯಷ್ಟು ಚಿನ್ನಾಭರಣ ಇರುವುದು ಬೆಳಕಿಗೆ ಬಂದಿದೆ.
Advertisement
Advertisement
ಎಸಿಪಿ, ಇನ್‍ಸ್ಪೆಕ್ಟರ್ ಗಳ ನೇತೃತ್ವದಲ್ಲಿ ಸ್ಥಳ ಮಹಜರು ನಡೆದಿದ್ದು, ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಮನೆಯಲ್ಲಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಮನೆ ಮಾಲೀಕ ಶಂಕರ್, ಇಬ್ಬರು ಅಳಿಯಂದಿರು, ಒಬ್ಬ ಸಂಬಂಧಿಕ ಸಹ ಜೊತೆಗಿದ್ದರು. ಮಹಜರು ವೇಳೆ ಈ ಸಂಪತ್ತು ಪತ್ತೆಯಾಗಿದೆ. 15 ಲಕ್ಷ ರೂ.ನಗದು, 2 ಕೆ.ಜಿ. ಚಿನ್ನಾಭರಣ ಪತ್ತೆಯಾಗಿವೆ. ಪೊಲೀಸರು ಕೀ ಮೇಕರ್ ನನ್ನು ಕರೆಸಿ, ಲಾಕರ್ ತೆಗೆಸಿದ್ದಾರೆ. ಅಲ್ಲದೆ ಮನೆಯ ರೂಮ್‍ಗಳಲ್ಲಿ ಅಲ್ಲಲ್ಲಿ ನೋಟುಗಳು ಹರಿದು ಬಿದ್ದಿದ್ದವು ಎನ್ನಲಾಗಿದೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್ ನೋಟ್‍ನಲ್ಲಿ ಅಪ್ಪನ ವಿರುದ್ಧವೇ ಮಕ್ಕಳ ಆರೋಪ
Advertisement
Advertisement
ಸ್ಥಳ ಮಹಜರು ವೇಳೆ ತಾನು ಉಪಸ್ಥಿತನಿರಬೇಕೆಂದು ಶಂಕರ್ ಬಯಸಿದ್ದರು. ಆತ್ಮಹತ್ಯೆ ಗೂ ಮುನ್ನ ಮಗ ಮಧುಸಾಗರ್ ಡೆತ್ ನೋಟ್ ಬರೆದಿಟ್ಟಿರುತ್ತಾನೆ. ಹೀಗಾಗಿ ಹಿರಿಯ ಅಧಿಕಾರಿಗಳು ನನ್ನ ಸಮ್ಮುಖದಲ್ಲೇ ಮಹಜರು ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದ. ಹೀಗಾಗಿ ಪೊಲೀಸರು ಶಂಕರ್ ಹಾಗೂ ಸಂಬಂಧಿಕರನ್ನು ಜೊತೆಯಲ್ಲೇ ಕರೆದೊಯ್ದಿದ್ದರು. ಇದೀಗ ಸಾವಿನ ಸಂಬಂಧ ಒಂದೊಂದೇ ಮಾಹಿತಿಗಳು ಸಿಗುತ್ತಿವೆ. ಇದನ್ನೂ ಓದಿ: ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಾಧ್ಯತೆ
ಇನ್ನೂ ಕೆಲ ಸಾಕ್ಷ್ಯಗಳು ಲ್ಯಾಪ್ ಟಾಪ್ ನಲ್ಲಿ ಇರುವ ಶಂಕೆ ಇದೆ. ಹೀಗಾಗಿ ಅವುಗಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಡೆತ್ ನೋಟ್ ಬರೆದಿದ್ದು, ಎಲ್ಲರೂ ಶಂಕರ್ ಮೇಲೆಯೇ ಆರೋಪ ಮಾಡಿದ್ದಾರೆ. ಅಪ್ಪನಿಗೆ ಅನೈತಿಕ ಸಂಬಂಧ ಇತ್ತು, ಸರಿಯಿಲ್ಲ ಎಂದು ದೂರಿದ್ದಾರೆ. ಹೀಗಾಗಿ ಮನೆ ಮಾಲೀಕ ಶಂಕರ್ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪಡಿ ಕೇಸ್ ದಾಖಲಾಗುವ ಸಾಧ್ಯತೆ ಹೆಚ್ಚಿದೆ. 9 ತಿಂಗಳ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಸಿಂಧುರಾಣಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಹ ಸಾಕ್ಷ್ಯ ಲಭ್ಯವಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಕೌಟುಂಬಿಕ ಕಲಹದಿಂದ್ಲೇ ಸಾಮೂಹಿಕ ಆತ್ಮಹತ್ಯೆ – ದುರಂತಕ್ಕೆ ಪತ್ನಿಯೇ ಕಾರಣವೆಂದ ಪತಿ ಶಂಕರ್