ನವದೆಹಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ (Shankar Mishra) ದೆಹಲಿ ನ್ಯಾಯಾಲಯದ (Delhi Sessions Court) ಮುಂದೆ ಹಾಜರಾಗಿದ್ದು, ವಿಚಾರಣೆ ವೇಳೆ ತಮ್ಮ ಮೇಲಿನ ಆರೋಪ ನಿರಾಕರಿಸಿದ್ದಾರೆ.
`ನಾನಲ್ಲ ಬದಲಿಗೆ ಮಹಿಳೆಯೇ (Women Passenger) ತನ್ನ ಮೇಲೆಯೇ ಮೂತ್ರ ವಿಸರ್ಜನೆ ಮಾಡಿದ್ದಾಳೆ’ ಎಂದು ಶಂಕರ್ ಮಿಶ್ರಾ ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ
ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿರುವ ಶಂಕರ್ ಮಿಶ್ರಾ, ದೂರುದಾರರ ಮೇಲೆ ನಾನು ಮೂತ್ರ ವಿಸರ್ಜನೆ ಮಾಡಿಲ್ಲ, ಮಹಿಳೆಯೇ ನನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾಳೆ. ದೂರುದಾರ ಮಹಿಳೆಯ ಸೀಟು ನಿರ್ಬಂಧಿಸಲಾಗಿತ್ತು ನಾನು ಅಲ್ಲಿಗೆ ತೆರಳಲು ಸಾಧ್ಯವಿರಲಿಲ್ಲ. ಮೂತ್ರ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೇ ನನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾಳೆ ಎಂದು ದೂರಿದ್ದಾರೆ.
ದೂರುದಾರ ಮಹಿಳೆ ಕಥಕ್ ನೃತ್ಯಗಾರ್ತಿ, ಶೇ.80 ಕಥಕ್ ನೃತ್ಯಗಾರರಿಗೆ ಈ ಸಮಸ್ಯೆ ಇದೆ ಎಂದು ಶಂಕರ್ ಮಿಶ್ರಾ ಅವರ ವಕೀಲರು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಮ್ ತುಳು ಹಾಡಿಗೆ ದನಿಯಾದ ಗಾಯಕಿ ಮಂಗ್ಲಿ
ಮಹಿಳೆಯ ಆಸನವನ್ನ ಹಿಂದಿನಿಂದ ಮಾತ್ರ ಸಂಪರ್ಕಿಸಬಹುದು, ಮುಂದಿನ ಸೀಟಿನಿಂದ ಸಂಪರ್ಕಿಸಲು ಸಾಧ್ಯವಿಲ್ಲ. ಹಿಂದಿನಿಂದ ಮೂತ್ರ ಮಾಡಿದರು ಅದು ಸೀಟಿನ ಮುಂಭಾಗದ ಪ್ರದೇಶಕ್ಕೆ ತಲುಪಲು ಸಾಧ್ಯವಿಲ್ಲ ಎಂದು ವಕೀಲರು ವಾದಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k