ಮಂಡ್ಯ: ಈ ಬಾರಿಯ ಬಜೆಟ್‍ನಲ್ಲಿ ನಗರದ ಜನರಿಗೆ ಸಿಹಿ ಸುದ್ದಿ ಸಿಗಲಿದ್ದು, ಸಕ್ಕರೆ ನಾಡಿನಲ್ಲಿ ಆದಷ್ಟು ಬೇಗ ಮೈಶುಗರ್ ಕಾರ್ಖಾನೆ ಪ್ರಾರಂಭವಾಗುತ್ತೆ ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಆಶ್ವಾಸನೆ ನೀಡಿದರು.
Advertisement
ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಖಾನೆ ಪ್ರಾರಂಭಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ಸುಕರಾಗಿದ್ದಾರೆ. ಕಾರ್ಖಾನೆಯು ರೈತರಿಗೆ ಅನುಕೂಲವಾಗಬೇಕು ಎಂಬುದೆ ನಮ್ಮ ಉದ್ದೇಶವಾಗಿದೆ. ಈಗಾಗಲೇ ಕಾರ್ಖಾನೆಯ ಕುರಿತು ತಾಂತ್ರಿಕ ಸಮಿತಿ ರಚನೆಯಾಗಿದೆ ಎಂದರು. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ
Advertisement
Advertisement
ಸಮಿತಿಯು ನೀಡುವ ಸಲಹೆಗಳ ಆಧಾರದ ಮೇಲೆ ಕಾರ್ಖಾನೆ ಆರಂಭಿಸುತ್ತೇವೆ. ಈ ಬಾರಿ ಬಜೆಟ್‍ನಲ್ಲಿ ಮಂಡ್ಯದ ಜನರಿಗೆ ಸಿಹಿ ಸುದ್ದಿ ಸಿಗಲಿದೆ. ಇದು ಖಾಸಗಿ ಸಹಭಾಗಿತ್ವದಲ್ಲಿ ಮಾಡಬೇಕೇ ಅಥವಾ ಸರ್ಕಾರಿ ಸ್ವಾಮ್ಯದಲ್ಲಿ ಆರಂಭಿಸಬೇಕೇ ಎಂಬುದು ತಾಂತ್ರಿಕ ಸಮಿತಿ ನೀಡುವ ವರದಿ ಆಧಾರದ ಮೇಲೆ ನಿರ್ಧಾರವಾಗುತ್ತೆ ಎಂದು ತಿಳಿಸಿದರು.