ಮುಂಬೈ: ಮಹಾರಾಷ್ಟ್ರದ (Maharashtra) ಹಿರಿಯ ರಾಜಕಾರಣಿ, ಎನ್‌ಸಿಪಿ ರಾಷ್ಟ್ರೀಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎನ್‌ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ಘೋಷಿಸಿದ್ದಾರೆ.
ಪವಾರ್ ಅವರು ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರಲ್ಲಿ ಒಬ್ಬರು. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ರಚಿಸಲು ಶಿವಸೇನಾ, ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ಮೈತ್ರಿಯನ್ನು ಒಟ್ಟುಗೂಡಿಸುವಲ್ಲಿ ದೊಡ್ಡ ಪಾತ್ರ ಹೊಂದಿದ್ದರು. ಇದನ್ನೂ ಓದಿ: ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ- ಡಿಕೆ ಶಿವಕುಮಾರ್ ಗ್ರೇಟ್ ಎಸ್ಕೇಪ್
Advertisement
Advertisement
ಉದ್ಧವ್ ಠಾಕ್ರೆ ಸರ್ಕಾರದಿಂದ ಬೇರ್ಪಟ್ಟ ನಂತರ ಏಕನಾಥ್ ಶಿಂಧೆ ಅವರು ಪಕ್ಷದ ತಂಡದೊಂದಿಗೆ ಬಿಜೆಪಿ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದ್ದರು. ಇದಾದ ಬಳಿಕ, ಈಚೆಗೆ ಎನ್‌ಸಿಪಿಯ ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರನ್ನು ತೊರೆದು ಬಿಜೆಪಿಯೊಂದಿಗೆ ಕೈಜೋಡಿಸಿ ಮುಂದಿನ ಸಿಎಂ ಆಗುತ್ತಾರೆಯೇ ಎಂಬ ಊಹಾಪೋಹದ ಸುದ್ದಿ ಹರಿದಾಡುತ್ತಿದೆ.
Advertisement
Advertisement
ಇದರ ಬೆನ್ನಲ್ಲೇ ಶರದ್ ಪವಾರ್ ಅವರು ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ರಾಜಕೀಯ ಬೆಳವಣಿಗೆ ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ. ಇದನ್ನೂ ಓದಿ: PublicTV Explainer: ಮತ ಪ್ರಮಾಣ ಹೆಚ್ಚಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಏರಿಲ್ಲ ಯಾಕೆ?