ಮುಂಬೈ: ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದೇಶವನ್ನು ಹಿಂದಕ್ಕೆ ಕೊಂಡೊಯ್ಯಲು ಪ್ರಯತ್ನಿಸಲಾಗುತ್ತಿದೆ ಎಂದು ಎನ್‍ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಬಿಜೆಪಿ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದೇಶವನ್ನು ಹಿಂದಕ್ಕೆ ಕೊಂಡೊಯ್ಯುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಆದರೆ ನಿಜವಾಗಿಯೂ ಹಸಿವು ಮತ್ತು ಉದ್ಯೋಗದಂತಹ ಮೂಲಭೂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಈ ತಿಂಗಳ ಆರಂಭದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕಗಳನ್ನು ತೆಗೆದು ಹಾಕಬೇಕೆಂದು ಒತ್ತಾಯಿಸುವ ಮೂಲಕ ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‍ಸಿಪಿ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಮೂಲೆಗುಂಪು ಮಾಡಲು ವಿರೋಧ ಪಕ್ಷವು ಯತ್ನಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಔಷಧಿಯ ಮೇಲಿನ ದರ ಶೇ.40 ರಷ್ಟು ಏರಿಸಿದ ಲಂಕಾ ಸರ್ಕಾರ
Advertisement
Advertisement
ಕೆಲವರು ಇದನ್ನು ಮಾಡುತ್ತೇನೆ, ಅದನ್ನು ಮಾಡುತ್ತೇನೆ, ಹನುಮಂತನ ಹೆಸರಿನಲ್ಲಿ ಮಾಡುತ್ತೇನೆ ಎಂದು ಹೇಳುತ್ತಾರೆ. ಆದರೆ ಅವರು ನಿರುದ್ಯೋಗದ ಸಮಸ್ಯೆಯನ್ನು ಪರಿಹರಿಸುತ್ತಾರೆಯೇ? ಹಸಿವಿನ ಸಮಸ್ಯೆ ಪರಿಹಾರವಾಗುತ್ತದೆಯೇ ಎಂದ ಅವರು, ಈ ರೀತಿ ಮಾಡುವುದರಿಂದ ಮೂಲಭೂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಿ ತಮ್ಮ ಸ್ವಹಿತಾಸಕ್ತಿ ಗಳಿಸಲು ನಿರ್ಧರಿಸಿದೆ. ಜೊತೆಗೆ ಪ್ರಚಾರವನ್ನು ಪಡೆಯುತ್ತಿದ್ದಾರೆ ಎಂದು ರಾಜ್ ಠಾಕ್ರೆಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಇದನ್ನೂ ಓದಿ: ಕೋವಿಡ್‌ನ ನಷ್ಟವನ್ನು ನೀಗಿಸಲು ಭಾರತಕ್ಕೆ 15 ವರ್ಷ ಬೇಕು: ಆರ್‌ಬಿಐ