ಮುಂಬೈ: ಮಹಾ ವಿಕಾಸ್ ಅಘಾಡಿ ಮಿತ್ರ ಪಕ್ಷಗಳಾದ ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡುತ್ತೇವೆ ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಭರವಸೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಎಂವಿಎ ಘಟಕಗಳು ಒಟ್ಟಾಗಿ ಸ್ಪರ್ಧಿಸಬೇಕು ಎಂಬುದು ನನ್ನ ವೈಯಕ್ತಿಕ ಆಶಯವಾಗಿದೆ. ಈ ಬಗ್ಗೆ ಮೊದಲು ನನ್ನ ಪಕ್ಷದ ನಾಯಕರೊಂದಿಗೆ ಚರ್ಚಿಸುತ್ತೇನೆ. ನಂತರ ಮಿತ್ರ ಪಕ್ಷದೊಂದಿಗೆ ಮಾತುಕತೆ ನಡೆಸಿ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದರು.
ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವು ಜೂನ್ 29 ರಂದು ಪತನಗೊಂಡಿತು. ಶಿವಸೇನೆಯು ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತು. ಇದನ್ನೂ ಓದಿ:ಮೋದಿ ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ: ಕೆಸಿಆರ್
ಜೂನ್ 30ರಂದು ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶಿಂಧೆ ಅವರು ಶಿವಸೇನೆಯ 40 ಬಂಡಾಯ ಶಾಸಕರ ಬೆಂಬಲವನ್ನು ಹೊಂದಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ – ಟಿಎಂಸಿ ನಡುವೆ `ಕಾಳಿ’ ಕದನ