BelgaumDistrictsKarnatakaLatestMain Post

ಬೆಳಗಾವಿಯಲ್ಲಿ ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್ ಪುಂಡರು

Advertisements

ಬೆಳಗಾವಿ: ನಾಡದ್ರೋಹಿ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದು ನಗರಕ್ಕೆ ಆಗಮಿಸಿರುವ ಮಹಾರಾಷ್ಟ್ರದ ಮಾಜಿ ಸಿಎಂ ಶರದ್ ಪವಾರ್ ಎದುರು ಪುಂಡಾಟಿಕೆ ಪ್ರದರ್ಶಿಸಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ನಾಡದ್ರೋಹಿ ಘೋಷಣೆ ಕೂಗಿದ ಘಟನೆ ನಡೆಯಿತು.

ಶರದ್ ಪವಾರ್ ಎರಡು ದಿನಗಳ ಕಾಲ ನಗರದ ಪ್ರವಾಸ ಕೈಗೊಂಡಿದ್ದು ಇಂದು ಬೆಳಗಾವಿಯ ಮರಾಠಾ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಶರದ್ ಪವಾರ್ ಭಾಷಣ ಆರಂಭವಾಗುತ್ತಿದ್ದಂತೆ ಎಂಇಎಸ್ ಪುಂಡರು, ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಬೇಕು ಎಂದು ಘೋಷಣೆ ಕೂಗಿದರು. ಇದನ್ನೂ ಓದಿ: ಲವ್ವರ್‌ ಭೇಟಿ ಮಾಡಲು ಗ್ರಾಮದ ಕರೆಂಟ್ ಕಟ್ ಮಾಡುತ್ತಿದ್ದ ಲೈನ್‌ಮ್ಯಾನ್

ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗುವ ವೇಳೆ ಶರದ್ ಪವಾರ್ ಸುಮ್ಮನೆ ನಿಂತರು. ನಾಡದ್ರೋಹಿಗಳ ಹಾರಾಟ ಮುಗಿದ ನಂತರ ಭಾಷಣ ಪ್ರಾರಂಭ ಮಾಡಬಹುದಾ ಎಂದು ಎಂಇಎಸ್ ಪುಂಡರನ್ನು ಶರದ್ ಪವಾರ್ ಕೇಳಿ, ನಿಮ್ಮ ಅನುಮತಿ ಪಡೆದು ಭಾಷಣ ಶುರುಮಾಡ್ತಿನಿ ಅಂತಾ ಹೇಳಿದರು. ಈ ವೇಳೆ ಎಂಇಎಸ್ ಮುಖಂಡ ದೀಪಕ್ ದಳವಿ, ಕೃಷ್ಣ ಮೊಪಸೆ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: 80ಕ್ಕೂ ಹೆಚ್ಚು ಮಕ್ಕಳನ್ನ ಕಾಡುತ್ತಿದೆ ಟೊಮೆಟೊ ಜ್ವರ – ಏನಿದರ ಲಕ್ಷಣ? 

Leave a Reply

Your email address will not be published.

Back to top button