ಕಲಬುರಗಿ: ಬೇಸಿಗೆ ಆರಂಭವಾದ್ದರಿಂದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Sharanaparakash Patil) ತಾಲೂಕಿನ ಪಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ `ಟಾಸ್ಕ್ ಪೋರ್ಸ್’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಂಚಾಯತ್ ಮಟ್ಟದಲ್ಲಿ ಪಿಡಿಓಗಳು ಬೋರ್‌ವೆಲ್‌ಗಳು ಹಾಗೂ ಜಲ ಮೂಲಗಳನ್ನು ಪರೀಕ್ಷಿಸಿ ಕ್ರಮಕೈಗೊಂಡು ವರದಿ ಸಲ್ಲಿಸಬೇಕು. ಹೆಚ್ಚು ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಶಾಶ್ವತ ಬೋರ್‌ವೆಲ್ ಕೊರೆಸಿ, ಇತರೆ ಬೋರ್‌ವೆಲ್‌ಗಳನ್ನು ಫ್ಲಶಿಂಗ್ ಮಾಡಿಸಿ ಜನರ ಅನುಕೂಲಕ್ಕೆ ತಕ್ಕಂತೆ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಲ್ಲಿ ಯು ಡಿಜಿಟಲ್ ಐದನೇ ವರ್ಷದ ವಾರ್ಷಿಕೋತ್ಸವ
ಸೇಡಂ ತಾಲೂಕಿನಲ್ಲಿ ನೀರಿನ ಪೂರೈಕೆಯಲ್ಲಿ ಎಲ್ಲಿಯೂ ಲೋಪಗಳಾಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿ, ಅನುದಾನದ ಬಳಕೆಯಲ್ಲಿ ಕುಡಿಯುವ ನೀರಿನ ಸರಬರಾಜಿಗೆ ಆದ್ಯತೆ ನೀಡಿ ಎಂದರು. ಇದನ್ನೂ ಓದಿ: ನಮ್ಮ ಪಕ್ಷದ ಗಾಡಿ ಫುಲ್ ಇದೆ: ಸತೀಶ್ ಜಾರಕಿಹೊಳಿ
ಪಿಡಿಓಗಳು ಗ್ರಾಮಗಳಿಗೆ ಭೇಟಿ ನೀಡಿ ಒಂದು ವಾರದಲ್ಲಿ ನನಗೆ ವರದಿ ಸಲ್ಲಿಸಬೇಕು. ಹೆಚ್ಚು ಬಿಸಿಲಿದೆ ಎಂದು ಮನೆಯಲ್ಲಿಯೇ ಕುಳಿತು ಮೊಬೈಲ್‌ನಲ್ಲಿ ವರದಿ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಇದನ್ನೂ ಓದಿ: ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಸೇವಾ ಶುಲ್ಕ ನಿಷೇಧ – ಸಿಸಿಪಿಎ ಮಾರ್ಗಸೂಚಿ ಎತ್ತಿ ಹಿಡಿದ ದೆಹಲಿ ಹೈಕೋರ್ಟ್
ಸಭೆಯಲ್ಲಿ ತಹಶೀಲ್ದಾರ್ ಶ್ರೇಯಾಂಕ್ ಪಾಟೀಲ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಪಿಡಿಓಗಳು ಉಪಸ್ಥಿತರಿದ್ದರು.